Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:26 - ಕನ್ನಡ ಸತ್ಯವೇದವು C.L. Bible (BSI)

26 ರಾಜ್ಯಾಧಿಕಾರಿಗಳಲ್ಲಿ ದಯೆ ಯಾಚಿಸುವವರು ಅನೇಕರು; ಪ್ರತಿಯೊಬ್ಬನಿಗೆ ಸರಿಯಾದ ನ್ಯಾಯ ದೊರಕಿಸುವವನು ಸರ್ವೇಶ್ವರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು; ನ್ಯಾಯತೀರ್ಪು ಯೆಹೋವನಿಂದಲೇ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅನೇಕರು ಅಧಿಪತಿಯಿಂದ ಸಹಾಯ ಬಯಸುವರು. ಆದರೆ ನ್ಯಾಯ ದೊರೆಯುವುದು ಯೆಹೋವನಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅನೇಕರು ಅಧಿಕಾರಿಯ ದಯೆಯನ್ನು ಹುಡುಕುತ್ತಾರೆ. ಆದರೆ ಯೆಹೋವ ದೇವರಿಂದಲೇ ಪ್ರತಿಯೊಬ್ಬರಿಗೂ ನ್ಯಾಯ ದೊರಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:26
18 ತಿಳಿವುಗಳ ಹೋಲಿಕೆ  

ಉದಾರಿಯ ಕೃಪೆಕೋರುವವರು ಅನೇಕರು; ದಾನಶೂರನಿಗೆ ಎಲ್ಲರು ಸ್ನೇಹಿತರು.


ಜಯವ ನೀಡು ಪ್ರಭು, ಅರಸನಿಗೆ I ಕಿವಿಗೊಡು ನೀ, ನಮ್ಮ ಪ್ರಾರ್ಥನೆಗೆ II


ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.


ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ಅದೃಷ್ಟದ ಚೀಟನ್ನು ಕುಲುಕಿ ಮಡಲಿಗೆ ಹಾಕಬಹುದು; ಆದರೆ ತೀರ್ಪು ಸರ್ವೇಶ್ವರನ ಕೈಯಲ್ಲಿರುವುದು.


ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದು ಚೆರೂಯಳ ಮಗನಾದ ಯೋವಾಬನಿಗೆ ತಿಳಿಯಿತು.


ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ.


ಪ್ರಭುವಿನ ಮುಖಪ್ರಸನ್ನತೆ ಜೀವದ ಒರತೆ; ಆತನ ಕರುಣೆ ಮುಂಗಾರು ಮಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು