Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:27 - ಕನ್ನಡ ಸತ್ಯವೇದವು C.L. Bible (BSI)

27 ಸಜ್ಜನರಿಗೆ ದುರ್ಮಾರ್ಗಿ ತಿರಸ್ಕೃತನು; ದುರ್ಜನರಿಗೆ ಸನ್ಮಾರ್ಗಿ ತಿರಸ್ಕೃತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು, ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು; ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಒಳ್ಳೆಯವರಿಗೆ ಯಥಾರ್ಥರಲ್ಲದವರು ಅಸಹ್ಯ. ಕೆಡುಕರು ಯಥಾರ್ಥರನ್ನು ದ್ವೇಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನೀತಿವಂತರು ಅಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ದುಷ್ಟರು ಪ್ರಾಮಾಣಿಕರನ್ನು ತಿರಸ್ಕರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:27
19 ತಿಳಿವುಗಳ ಹೋಲಿಕೆ  

ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿ.


ನನ್ನ ಮೇಲೆ ದ್ವೇಷ ಇದ್ದವನಿಗೆ ನನ್ನ ಪಿತನ ಮೇಲೆಯೂ ದ್ವೇಷ ಇದೆ.


ಪ್ರಭು, ನಿನ್ನ ದ್ವೇಷಿಗಳನು ನಾ ದ್ವೇಷಿಸದಿರುವೆನೆ? I ನಿನ್ನ ವಿರೋಧಿಗಳನ್ನು ನಾ ತಿರಸ್ಕಾರ ಮಾಡದಿರುವೆನೆ? II


ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.


ಕೊಲೆಪಾತಕರು ನೀತಿವಂತನನ್ನು ದ್ವೇಷಿಸುವರು; ಅಂಥವನ ಪ್ರಾಣಕ್ಕೂ ಹೊಂಚುಹಾಕುವರು.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ಮೂರ್ಖನ ಯೋಜನೆ ಪಾಪಮಯ; ಕುಚೋದ್ಯನು ಜನರಿಂದ ತಿರಸ್ಕೃತನು.


ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II


ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


“ಬಳಿಕ ಜನರು ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು. ನೀವು ನನ್ನವರು, ಆದುದರಿಂದಲೇ ಜನಾಂಗಗಳೆಲ್ಲ ನಿಮ್ಮನ್ನು ದ್ವೇಷಿಸುವುವು.


ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ.


ದುರ್ಜನರೇ ತೊಲಗಿರಿ ನನ್ನಿಂದ ದೂರ I ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ II


ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II


ಹಗೆಮಾಡುವೆನವರನು ಸಂಪೂರ್ಣವಾಗಿ I ಭಾವಿಸುವೆನವರನು ನನ್ನ ವೈರಿಗಳನ್ನಾಗಿ II


ಬುದ್ಧಿವಂತನನ್ನು ಅವರ ಬುದ್ಧಿಗೆ ತಕ್ಕಂತೆ ಜನ ಹೊಗಳುವರು; ವಕ್ರಬುದ್ಧಿಯುಳ್ಳವನನ್ನಾದರೊ ಅವರು ತೆಗಳುವರು.


ಮಸ್ಸಾಗೆ ಸೇರಿದ ಜಾಕೆ ಎಂಬುವವನ ಮಗ ಆಗೂರನ ಹಿತೋಕ್ತಿಗಳು: ಈತನು ಇಥಿಯೇಲನಿಗೆ ಹಾಗೂ ಉಕ್ಕಾಲನಿಗೆ ಮಾಡಿದ ಪ್ರವಾದನೆ:


ನನ್ನ ಬಿಟ್ಟು ತೊಲಗಲಿ ಮೂರ್ಖತನ I ನನಗೆ ಹತ್ತದೆಯಿರಲಿ ಕೆಟ್ಟತನ II


ಇಷ್ಟಸಿದ್ಧಿ ಮನಸ್ಸಿಗೆ ಸಿಹಿ; ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು