Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:3 - ಕನ್ನಡ ಸತ್ಯವೇದವು C.L. Bible (BSI)

3 ಜ್ಞಾನಪ್ರಿಯ ಮಗನಿಂದ ತಂದೆಗೆ ಸಂತೋಷ; ವೇಶ್ಯೆಯರ ಸಂಗದಿಂದ ಆಸ್ತಿ ವಿನಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು, ವೇಶ್ಯೆಯ ಸಂಗಡಿಗನು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜ್ಞಾನಾಸಕ್ತನು ತಂದೆಯನ್ನು ಹರ್ಷಗೊಳಿಸುವನು; ವೇಶ್ಯಾಸಂಗಿಯು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜ್ಞಾನವನ್ನು ಪ್ರೀತಿಸುವವನ ತಂದೆ ಬಹು ಸಂತೋಷವಾಗಿರುವನು. ಆದರೆ ಸೂಳೆಯರ ಸಹವಾಸ ಮಾಡುವವನು ತನ್ನ ಐಶ್ವರ್ಯವನ್ನು ಕಳೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜ್ಞಾನಪ್ರಿಯನು ತಂದೆಗೆ ಆನಂದ ಆದರೆ ವೇಶ್ಯೆಯರ ಸಹವಾಸದಿಂದ ಆಸ್ತಿಯ ವಿನಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:3
14 ತಿಳಿವುಗಳ ಹೋಲಿಕೆ  

ಮಗನೇ, ಜ್ಞಾನಗಳಿಸಿ ನನ್ನ ಮನಸ್ಸನ್ನು ಸಂತೋಷಪಡಿಸು; ಆಗ ನನ್ನ ನಿಂದಕರಿಗೆ ಸರಿಯಾದ ಉತ್ತರ ಸಿಕ್ಕುವುದು.


ಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದ ಈ ನಿಮ್ಮ ಮಗ ಬಂದದ್ದೇ ಕೊಬ್ಬಿಸಿದ ಪ್ರಾಣಿಯನ್ನು ಕೊಯ್ಯಿಸಿದ್ದೀರಿ!’ ಎಂದು ವಾದಿಸಿದ.


ಬುದ್ಧಿವಂತ ಮಗ ತಂದೆಯನ್ನು ಸಂತೋಷಗೊಳಿಸುತ್ತಾನೆ; ಬುದ್ಧಿಹೀನನು ಹೆತ್ತ ತಾಯಿಯನ್ನು ತಿರಸ್ಕರಿಸುತ್ತಾನೆ.


ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.


ಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆಬಿಟ್ಟು ಹೋದ. ದೂರದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲುಮಾಡಿಬಿಟ್ಟ.


ಜ್ಞಾನಿಯಾದ ಮಗ ಧರ್ಮಶಾಸ್ತ್ರವನ್ನು ಕೈಗೊಳ್ಳುವನು; ಹೊಟ್ಟೆಬಾಕರ ಗೆಳೆಯ ತಂದೆಗೆ ಅಪಕೀರ್ತಿ ತರುವನು.


ವೇಶ್ಯೆಯನ್ನು ಕೊಂಡುಕೊಳ್ಳಬಹುದು ತುಂಡುರೊಟ್ಟಿಗೆ, ವ್ಯಭಿಚಾರಿಣಿಯೇ ಬೇಟೆಮಾಡುವಳು ನಿನ್ನ ಸಿರಿಪ್ರಾಣಕ್ಕೆ!


ಭೋಗಾಸಕ್ತನು ಬಡವನಾಗುವನು, ಮಧ್ಯಸುಗಂಧಗಳನ್ನು ಬಯಸುವವನು ಧನವಂತನಾಗನು.


ದುಡಿದು ಹೊಲ ಗೇಯುವವನಿಗೆ ಹೊಟ್ಟೆ ತುಂಬ ಅನ್ನ; ವ್ಯರ್ಥಕಾರ್ಯಗಳಲ್ಲಿ ಆಸಕ್ತನಾದವನಿಗೆ ಬೇಕಾದಷ್ಟು ಬಡತನ.


ಮಗನೇ, ನೀನು ಬುದ್ಧಿವಂತನಾದರೆ ಆನಂದವೇ ಆನಂದ ನನ್ನ ಮನಸ್ಸಿಗೆ.


ಬುದ್ಧಿವಂತನ ಮನೆಯ ಸಿರಿ, ಎಣ್ಣೆ ಬೆಣ್ಣೆ; ಬುದ್ಧಿಹೀನನು ನುಂಗಿಬಿಡುವನು ಸರ್ವಸ್ವವನ್ನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು