Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:6 - ಕನ್ನಡ ಸತ್ಯವೇದವು C.L. Bible (BSI)

6 ಕೆಟ್ಟವನು ತನ್ನ ಪಾಪಪಾಶದಲ್ಲೆ ಸಿಕ್ಕಿಬೀಳುವನು; ಒಳ್ಳೆಯವನು ಉಲ್ಲಾಸದಿಂದ ಹಾಡಿ ಹರ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು, ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು; ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕೆಡುಕರು ತಮ್ಮ ಪಾಪದಿಂದಲೇ ಸಿಕ್ಕಿಕೊಳ್ಳುವರು. ಒಳ್ಳೆಯವರಾದರೋ ಸಂತೋಷದಿಂದ ಹಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕೆಟ್ಟವನು ತನ್ನ ಪಾಪದಿಂದಲೇ ಸಿಕ್ಕಿಹಾಕಿಕೊಳ್ಳುತ್ತಾನೆ, ಆದರೆ ನೀತಿವಂತನು ಸಂತೋಷದಿಂದ ಹಾಡಿ ಹರ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:6
19 ತಿಳಿವುಗಳ ಹೋಲಿಕೆ  

ಸೈತಾನನ ಬಲೆಯಲ್ಲಿ ಸಿಕ್ಕಿಕೊಂಡು ಅವನ ಇಚ್ಛಾನುಸಾರ ನಡೆಯುವವರು ಹೀಗೆ ಬಿಡುಗಡೆಹೊಂದಲು ಸಾಧ್ಯವಾಗಬಹುದು.


ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.


ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು


ಜಯಘೋಷ, ಹರ್ಷಸುನಾದ ಸಜ್ಜನರ ಬಿಡಾರದಿಂದ I “ಪರಾಕ್ರಮ, ಪ್ರದರ್ಶನ ಪ್ರಭುವಿನ ಬಲಗೈಯಿಂದ II


ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ನನ್ನ ಪ್ರಿಯ ಸಹೋದರರೇ, ನಿಮಗೆ ವಿವಿಧ ಸಂಕಟ ಶೋಧನೆಗಳು ಬಂದೊದಗಿದಾಗ ಅವುಗಳನ್ನು ಸಂತೋಷದಿಂದ ಸಹಿಸಿಕೊಳ್ಳಿ.


ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ಹೊದಿಸುವೆನಿದರ ಯಾಜಕರಿಗೆ ರಕ್ಷಣಾವಸ್ತ್ರವನು I ಸಾಧುಸಂತರು ಮಾಡುವರಿದರ ಹರ್ಷೋದ್ಗಾರವನು II


ನಮ್ಮೆಲ್ಲರ ಆನಂದವು ಪರಿಪೂರ್ಣವಾಗುವಂತೆ ಇದನ್ನು ಬರೆಯುತ್ತಿದ್ದೇವೆ.


ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣ ಅಗ್ನಿಗೆ ಆಹುತಿ ಆದದ್ದನ್ನು ಕಂಡು ತಮಗೆ ಅಪಾಯ ಪ್ರಾಪ್ತ ಆಯಿತೆಂದು ಕಳವಳಗೊಂಡರು.


ವಕ್ರಬುದ್ಧಿಯುಳ್ಳವನ ಹಾದಿತುಂಬ ಮುಳ್ಳು, ಉರುಳು; ಅದರಿಂದ ದೂರವಿರುವನು ಪ್ರಾಣದಾಸೆಯುಳ್ಳವನು.


ಸಜ್ಜನರ ನಂಬಿಕೆ ಆನಂದಕರ; ದುರ್ಜನರ ನಿರೀಕ್ಷೆ ವಿನಾಶಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು