Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 29:9 - ಕನ್ನಡ ಸತ್ಯವೇದವು C.L. Bible (BSI)

9 ಮೂರ್ಖನ ಸಂಗಡ ಜ್ಞಾನಿ ತರ್ಕಮಾಡಿದ್ದೆ ಆದರೆ ಆ ಮೂರ್ಖ ರೇಗಬಹುದು, ನಗಬಹುದು, ತರ್ಕಮಾತ್ರ ಮುಗಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ, ರೇಗಿದರೂ, ನಕ್ಕರೂ ಜಗಳವು ತೀರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೂರ್ಖನ ಸಂಗಡ ಜ್ಞಾನಿಯು ವ್ಯಾಜ್ಯವಾಡುವಾಗ ರೇಗಿದರೂ ನಕ್ಕರೂ ಜಗಳವು ತೀರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜ್ಞಾನಿಯು ಮೂಢನೊಂದಿಗೆ ನ್ಯಾಯಾಲಯಕ್ಕೆ ಹೋದರೆ, ಮೂಢನು ಕೇವಲ ಆರ್ಭಟಿಸುವನು; ಹುಚ್ಚುಚ್ಚಾಗಿ ಕೂಗಾಡುವನು; ಅವರಿಗೆ ಪರಿಹಾರ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯಮಾಡುವಾಗ, ಮೂರ್ಖನು ರೇಗಿದರೂ ಅಪಹಾಸ್ಯಮಾಡಿದರೂ ಸಮಾಧಾನವೇ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 29:9
7 ತಿಳಿವುಗಳ ಹೋಲಿಕೆ  

ಮೂಢನ ಪ್ರಶ್ನೆಗೆ ಉತ್ತರಕೊಡಬೇಡ; ಮೂರ್ಖನಂತೆ ಕೊಟ್ಟರೆ ನೀನೂ ಆದಿಯೇ ಅವನಂತೆ.


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ಮೂರ್ಖತನದಲ್ಲಿ ಮುಳುಗಿರುವ ಮೂಢನಿಗೆ ಎದುರಾಗುವುದಕ್ಕಿಂತಲು ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವುದು ಲೇಸು.


ಕುಚೋದ್ಯರು ಪಟ್ಟಣಕ್ಕೆ ಬೆಂಕಿ ಹಚ್ಚುವರು; ಜ್ಞಾನಿಗಳೊ ರೋಷಾಗ್ನಿಯನ್ನು ಆರಿಸುವರು.


ಕೊಲೆಪಾತಕರು ನೀತಿವಂತನನ್ನು ದ್ವೇಷಿಸುವರು; ಅಂಥವನ ಪ್ರಾಣಕ್ಕೂ ಹೊಂಚುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು