Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:1 - ಕನ್ನಡ ಸತ್ಯವೇದವು C.L. Bible (BSI)

1 ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ನಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮಗನೇ, ನನ್ನ ಉಪದೇಶವನ್ನು ಮರೆಯಬೇಡ; ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:1
31 ತಿಳಿವುಗಳ ಹೋಲಿಕೆ  

ಮರೆಯಬೇಡ, ನನ್ನ ಮಾತಿಗೆ ಓರೆಯಾಗಬೇಡ, ಜ್ಞಾನವನ್ನು ಪಡೆ. ವಿವೇಕವನ್ನು ಗಳಿಸಿಕೊ.


ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II


ಮಗನೇ, ನಿನ್ನ ತಂದೆಯ ಬೋಧೆಗೆ ಕಿವಿಗೊಡು, ನಿನ್ನ ತಾಯಿಯ ಉಪದೇಶವನ್ನು ತೊರೆಯದಿರು.


ಮರೆಯೆ ನಾನೆಂದಿಗೂ ನಿನ್ನ ನಿಯಮಗಳನು I ಅವುಗಳಿಂದಲೇ ನನಗಿತ್ತೆ ನವಜೀವನವನು II


ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


“ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬಾಳಿ ಅಭಿವೃದ್ಧಿಯಾಗುವಿರಿ. ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ನನ್ನ ಕಷ್ಟವ ನೋಡಿ ಮುಕ್ತಗೊಳಿಸೆನ್ನನು I ಮರೆತಿಲ್ಲ ನಾನು ನಿನ್ನ ಧರ್ಮಶಾಸ್ತ್ರವನು II


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ಪ್ರಭು, ದಾರಿತಪ್ಪಿದ ಕುರಿ ನಾನು I ಪರಾಂಬರಿಸು ನಿನ್ನ ದಾಸನನು I ಮರೆಯೆನು ನಿನ್ನಾಜ್ಞೆಗಳನು II


“ಎಚ್ಚರಿಕೆಯಾಗಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡಬೇಡಿ. ಅವರು ಪೂಜಿಸಬೇಡಿರೆಂದು ನಿಷೇಧಿಸಿದ ಯಾವ ವಿಗ್ರಹ ವಸ್ತುಗಳನ್ನೂ ಮಾಡಿಕೊಳ್ಳಬೇಡಿ.


ಕುಡಿದರೆ ಕರ್ತವ್ಯವನ್ನು ಮರೆಯುತ್ತಾರೆ; ದೀನದಲಿತರಿಗೆ ನ್ಯಾಯ ತೀರಿಸದೆ ತಾರತಮ್ಯ ಮಾಡುತ್ತಾರೆ.


ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ !


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.


ದೀರ್ಘಾಯುಸ್ಸನ್ನಿತ್ತು ತೃಪ್ತಿಪಡಿಸುವೆನು I ನಾನು ನೀಡುವ ಮುಕ್ತಿಯನವನಿಗೆ ಮನಗಾಣಿಸುವೆನು” II


ದುರ್ಜನರ ಪಾಶಗಳು ಸುತ್ತಿಕೊಂಡಿವೆ ನನ್ನನು I ಆದರು ನಾ ಮರೆಯಲಿಲ್ಲ ನಿನ್ನ ಧರ್ಮಶಾಸ್ತ್ರವನು II


ಮಗನೇ, ನನ್ನ ಮಾತುಗಳನ್ನು ಅಂಗೀಕರಿಸು; ನಿಧಿಯಂತೆ ನನ್ನ ವಿಧಿಗಳನ್ನು ಕಾದಿರಿಸು.


ನಾನು ನಿಮಗೆ ನೀಡುವುದು ಸದುಪದೇಶ; ನೀವು ಅದನ್ನು ಕೈಬಿಡಬೇಡಿ.


ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.


ಮಗನೇ, ನಾನು ಹೇಳುವುದು ನಾಟಲಿ ನಿನ್ನ ಮನಸ್ಸಿಗೆ; ನನ್ನ ನಡತೆ ಆದರ್ಶಕವಾಗಿರಲಿ ನಿನ್ನ ಕಣ್ಣುಗಳಿಗೆ.


‘ನಿನ್ನ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ, ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಸುಕ್ಷೇಮವಾಗಿ ಬಾಳುವೆ.


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


ಅವು ನಿನ್ನ ಕಣ್ಣಿಗೆ ಮರೆಯಾಗದಿರಲಿ, ನಿನ್ನ ಹೃದಯದೊಳಗೆ ಭದ್ರವಾಗಿರಲಿ.


ಕೇಳಿ, ಜ್ಞಾನವೆಂಬಾಕೆ ಕರೆಯುತ್ತಾಳೆ ವಿವೇಕವೆಂಬಾಕೆ ಕೂಗಿ ಕರೆಯುತ್ತಿದ್ದಾಳೆ!


ಜ್ಞಾನವೆಂಬಾಕೆ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಅದಕ್ಕೆ ಏಳು ಸ್ತಂಭಗಳನ್ನು ಕೆತ್ತಿಸಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು