Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:10 - ಕನ್ನಡ ಸತ್ಯವೇದವು C.L. Bible (BSI)

10 ಆಗ ನಿನ್ನ ಕಣಜಗಳು ದವಸಧಾನ್ಯದಿಂದ ಭರ್ತಿಯಾಗುವುವು, ನಿನ್ನ ತೊಟ್ಟಿಗಳು ದ್ರಾಕ್ಷಾರಸದಿಂದ ತುಂಬಿ ತುಳುಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿತುಳುಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ನಿನ್ನ ಕಣಜಗಳು ದವಸಧಾನ್ಯಗಳಿಂದ ತುಂಬಿರುತ್ತವೆ. ನಿನ್ನ ದ್ರಾಕ್ಷಾರಸದ ತೊಟ್ಟಿಗಳು ತುಂಬಿತುಳುಕುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು; ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:10
15 ತಿಳಿವುಗಳ ಹೋಲಿಕೆ  

ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


“ನಿಮ್ಮ ಕಣಜಗಳು ಯಾವಾಗಲೂ ತುಂಬಿ ಇರುವಂತೆ ಹಾಗು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶುಭವನ್ನು ಅನುಗ್ರಹಿಸುವರು. ಅವರು ನಿಮಗೆ ಕೊಡುವ ನಾಡಿನಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವರು.


ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.


ಕಣಗಳಲ್ಲಿ ಗೋದಿ ರಾಶಿರಾಶಿಯಾಗಿರುವುದು. ತೊಟ್ಟಿಗಳಲ್ಲಿ ದ್ರಾಕ್ಷಾರಸ, ತೈಲಗಳು ತುಂಬಿರುವುವು.


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ಇನ್ನು ಮುಂದಕ್ಕೂ ಕಣಜದಲ್ಲಿ ಕಾಳಿಲ್ಲದೆ ಇರುವುದೋ? ದ್ರಾಕ್ಷೆ, ಅಂಜೂರ, ದಾಳಿಂಬೆ, ಓಲಿವ್ ಗಿಡಗಳು ಫಲಿಸದೆಹೋಗುವವೋ? ಇಲ್ಲ. ಈ ದಿನ ಮೊದಲ್ಗೊಂಡು ನಾನು ನಿಮ್ಮನ್ನು ಆಶೀರ್ವದಿಸುವೆನು.”


ದೇವಾಲಯದ ಸೇವಾಸಂಬಂಧದಲ್ಲೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲೂ ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದ ಮಾಡಿ ಮುಗಿಸಿ, ತನ್ನ ದೇವರ ಒಲುಮೆಯನ್ನು ಗಳಿಸಿಕೊಂಡನು.


ತುಂಬಿರಲಿ ಸಕಲ ವಿಧ ಧಾನ್ಯಗಳಿಂದ ನಮ್ಮ ಕಣಜಗಳು I ಈಯಲಿ ಸಾವಿರಾರು ಮರಿಗಳನು ನಮ್ಮ ಹೊಲದ ಕುರಿಗಳು II


ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.


ಚಾದೋಕ್ ಸಂತಾನದ ಮಹಾಯಾಜಕ ಅಜರ್ಯನು, “ಜನರು ದೇವರಾದ ಸರ್ವೇಶ್ವರನಿಗೆ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಸರ್ವೇಶ್ವರ ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು