Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:14 - ಕನ್ನಡ ಸತ್ಯವೇದವು C.L. Bible (BSI)

14 ಬೆಳ್ಳಿಗಿಂತ ಜ್ಞಾನ ಗಳಿಕೆ ಶ್ರೇಷ್ಠ, ಬಂಗಾರಕ್ಕಿಂತ ಜ್ಞಾನ ಸಂಪಾದನೆ ಉತ್ಕೃಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ, ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದರ ಲಾಭವು ಬೆಳ್ಳಿಯ ಲಾಭಕ್ಕಿಂತಲೂ ಅದರಿಂದಾಗುವ ಆದಾಯವು ಬಂಗಾರಕ್ಕಿಂತಲೂ ಅಮೂಲ್ಯವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಜ್ಞಾನವು ಬೆಳ್ಳಿಗಿಂತಲೂ ಲಾಭದಾಯಕ. ಅದರ ಆದಾಯವು ಬಂಗಾರಕ್ಕಿಂತಲೂ ಅಧಿಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ಜ್ಞಾನವು ಬೆಳ್ಳಿಗಿಂತ ಹೆಚ್ಚು ಲಾಭವೂ; ಬಂಗಾರಕ್ಕಿಂತ ಹೆಚ್ಚು ಆದಾಯವನ್ನು ಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:14
13 ತಿಳಿವುಗಳ ಹೋಲಿಕೆ  

ಬಂಗಾರಕ್ಕಿಂತ ಜ್ಞಾನಾರ್ಜನೆ ಎಷ್ಟೋ ಮೇಲು; ಬೆಳ್ಳಿಗಿಂತ ವಿವೇಕಾರ್ಜನೆ ಎಷ್ಟೋ ಲೇಸು.


ನಾನು ನೀಡುವ ಫಲ ಬಂಗಾರಕ್ಕಿಂತ ಶ್ರೇಷ್ಠ ನನ್ನಿಂದ ದೊರಕುವ ಆದಾಯ ಅಪ್ಪಟ ಬೆಳ್ಳಿಗಿಂತ ಅಮೂಲ್ಯ.


ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?


ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


ಹಣದಂತೆ ಅದನ್ನು ಹುಡುಕು, ನಿಧಿಯಂತೆ ಅದನ್ನು ತಡಕು.


ಜನರಿಗಾನಂದ ಅನಿರೀಕ್ಷಿತ ಆಸ್ತಿಯಲಿ I ನನಗಾದರೋ ಪರಮಾನಂದ ನಿನ್ನ ನುಡಿಯಲಿ II


ಸಾವಿರಾರು ಚಿನ್ನಬೆಳ್ಳಿ ನಾಣ್ಯಗಳಿಗಿಂತ I ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ II


ಜ್ಞಾನವು ಆಸ್ತಿಗಿಂತ ಪ್ರಯೋಜನಕರ; ಜೀವಿತರಿಗೆ ಅದು ಎಷ್ಟೋ ಲಾಭಕರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು