Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:16 - ಕನ್ನಡ ಸತ್ಯವೇದವು C.L. Bible (BSI)

16 ದೀರ್ಘಾಯುಷ್ಯ, ಜ್ಞಾನವೆಂಬ ಆಕೆಯ ಬಲಗೈಯಲ್ಲಿದೆ; ಘನತೆ, ಶ್ರೀಮಂತಿಕೆಯೂ ಆಕೆಯ ಎಡಗೈಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ ಘನತೆಯೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜ್ಞಾನವೆಂಬಾಕೆಯ ಬಲಗೈಯಿಂದ ದೀರ್ಘಾಯುಷ್ಯವೂ ಎಡಗೈಯಿಂದ ಐಶ್ವರ್ಯವೂ ಘನತೆಯೂ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಜ್ಞಾನದ ಬಲಗೈಯಲ್ಲಿ ದೀರ್ಘಾಯುಷ್ಯವಿದೆ; ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:16
14 ತಿಳಿವುಗಳ ಹೋಲಿಕೆ  

ಅವು ನಿನ್ನ ದಿನಗಳನ್ನು ಹೆಚ್ಚಿಸುತ್ತವೆ; ನಿನಗೆ ದೀರ್ಘಾಯುಸ್ಸನ್ನು ತರುತ್ತವೆ, ನಿನಗೆ ಸುಕ್ಷೇಮವನ್ನು ಉಂಟುಮಾಡುತ್ತವೆ.


ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ಸರ್ವೇಶ್ವರನಲ್ಲಿ ಭಯಭಕ್ತಿ ದೀನಮನೋಭಾವ, ಇವು ನೀಡುವ ಫಲ-ಸಂಪತ್ತು, ಸನ್ಮಾನ, ಆಯುಸ್ಸು.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ಇದಲ್ಲದೆ, ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಸಿರಿಸಂಪತ್ತಿನಲ್ಲಿಯೂ ಘನತೆ ಗೌರವದಲ್ಲಿಯೂ ನಿನಗೆ ಸಮಾನವಾದ ಅರಸನು ಇನ್ನೊಬ್ಬನಿರುವುದಿಲ್ಲ.


ಈ ಕಾಲದಲ್ಲೇ ಮನೆ, ಅಣ್ಣತಮ್ಮ, ಅಕ್ಕತಂಗಿ, ತಾಯಿ, ಮಕ್ಕಳು, ಹೊಲಗದ್ದೆ ಇವೆಲ್ಲವನ್ನೂ ನೂರ್ಮಡಿಯಷ್ಟು ಪಡೆಯುವನು. ಇವುಗಳೊಂದಿಗೆ ಹಿಂಸೆಯನ್ನೂ ಅನುಭವಿಸಬೇಕಾಗುವುದು; ಅದಲ್ಲದೆ ಮುಂದಿನ ಲೋಕದಲ್ಲಿ ಅಮರಜೀವವನ್ನು ಪಡೆಯುವನು.


ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II


ವೃದ್ಧಾಪ್ಯದಲಿ ನನ್ನ ತಳ್ಳಿಬಿಡಬೇಡಯ್ಯಾ I ಶಕ್ತಿ ಕುಂದುತ್ತಿರುವಾಗ ಕೈಬಿಡಬೇಡಯ್ಯಾ II


ಸಿರಿಸಂಪತ್ತಿರುವುದವನ ಮನೆಯಲಿ ಸಮೃದ್ಧಿಯಾಗಿ I ನೀತಿ ಫಲಿಸುವುದು ಆತನ ಮನದಲಿ ಶಾಶ್ವತವಾಗಿ II


ನನ್ನಿಂದ ನಿನಗೆ ಸಿಗುವುದು ದೀರ್ಘಾಯುಸ್ಸು; ವೃದ್ಧಿಯಾಗುವುದು ನಿನ್ನ ಜೀವದ ಅವಧಿ.


ಬೆಳೆಯನು ಅದು ನಿನಗೆ ಹೊತ್ತು ತರುವುದೆಂದು ನಂಬುವೆಯಾ? ಕಣದಲಿ ನಿನಗೆ ಕಾಳನು ಕೂಡಿಸುವುದೆಂಬ ನಂಬಿಕೆ ನಿನಗಿದೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು