Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:21 - ಕನ್ನಡ ಸತ್ಯವೇದವು C.L. Bible (BSI)

21 ಮಗನೇ, ಸುಜ್ಞಾನ, ಸದ್ಬುದ್ಧಿಗಳು ನಿನ್ನಲ್ಲಿ ಸ್ಥಿರವಾಗಿರಲಿ; ನಿನ್ನ ಕಣ್ಣುಗಳಿಂದ ಅವು ಮರೆಯಾಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಮಗನೇ, ಸುಜ್ಞಾನವನ್ನೂ ಮತ್ತು ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮಗನೇ, ಸುಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನ ಮಗನೇ, ಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ. ನಿನ್ನ ದೃಷ್ಟಿಯು ಅವುಗಳ ಮೇಲೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮಗನೇ, ಜ್ಞಾನವನ್ನೂ ತಿಳುವಳಿಕೆಯನ್ನೂ ಕಾಪಾಡಿಕೋ, ನಿನ್ನ ಕಣ್ಣುಗಳಿಂದ ಅವು ತಪ್ಪಿಹೋಗದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:21
18 ತಿಳಿವುಗಳ ಹೋಲಿಕೆ  

ಈ ಧರ್ಮಶಾಸ್ತ್ರ ಸದಾ ನಿನ್ನ ಬಾಯಲ್ಲಿರಲಿ. ಹಗಲಿರುಳು ಅದನ್ನು ಧ್ಯಾನಿಸು. ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಗೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲಾ ಕೈಗೂಡುವುದು. ನೀನು ಕೃತಾರ್ಥನಾಗುವೆ.


ಅವು ನಿನ್ನ ಕಣ್ಣಿಗೆ ಮರೆಯಾಗದಿರಲಿ, ನಿನ್ನ ಹೃದಯದೊಳಗೆ ಭದ್ರವಾಗಿರಲಿ.


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


ಜ್ಞಾನವನ್ನು ಸಜ್ಜನರಿಗೆ ಸೇರಿಸಿಡುವನಾತ, ಸನ್ಮಾರ್ಗಿಗಳಿಗೆ ಕವಚವಾಗಿರುವನಾತ.


ಮೊದಲಿನಿಂದಲೂ ನೀವು ಯಾವ ಸಂದೇಶವನ್ನು ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಸಲಿ. ಮೊದಲಿನಿಂದಲೂ ನೀವು ಕೇಳಿದ ಸಂದೇಶ ನಿಮ್ಮಲ್ಲಿ ನೆಲೆಸಿದರೆ ಪುತ್ರನಲ್ಲಿಯೂ ಪಿತನಲ್ಲಿಯೂ ನೀವು ನೆಲೆಸುತ್ತೀರಿ.


ಮೂಢರಿಗೆ ಬುದ್ಧಿಯನ್ನೂ ಯುವಜನರಿಗೆ ತಿಳುವಳಿಕೆಯನ್ನೂ ಕಲಿಸುವುದಕ್ಕೆ ಒದಗುತ್ತವೆ ಈ ಜ್ಞಾನೋಕ್ತಿಗಳು.


ಆಗ ನೀನು ವಿವೇಕಶೀಲನಾಗುವೆ; ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಯ್ದುಕೊಳ್ಳುವುವು.


ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.


ಬೇರೆಯವರೊಡನೆ ಸೇರದವನು ಸ್ವೇಚ್ಛಾನುಸಾರ ನಡೆಯುವನು; ಇತರರು ಸುಜ್ಞಾನವೆನ್ನುವುದನ್ನೇ ವಿರೋಧಿಸುವನು.


ಜ್ಞಾನವನ್ನು ಕೈಬಿಡದಿದ್ದರೆ, ಅದು ನಿನ್ನನ್ನು ಕಾಪಾಡುವುದು; ನೀನದನ್ನು ಪ್ರೀತಿಸಿದೆಯಾದರೆ, ಅದು ನಿನ್ನನ್ನು ಕಾಯುವುದು.


ಬುದ್ಧಿಯನ್ನು ಗಳಿಸುವವನು ತನಗೆ ತಾನೇ ಗೆಳೆಯನು; ವಿವೇಕವನ್ನು ಕಾಪಾಡುವವನು ಪಡೆಯುವನು ಏಳಿಗೆಯನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು