Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:24 - ಕನ್ನಡ ಸತ್ಯವೇದವು C.L. Bible (BSI)

24 ಮಲಗುವಾಗ ನಿನಗೆ ಹೆದರಿಕೆಯಿರದು, ಮಲಗಿದ ಮೇಲೆ ಸುಖನಿದ್ರೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀನು ಮಲಗುವಾಗ ಹೆದರಿಕೆ ಇರುವುದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀನು ಮಲಗುವಾಗ ಹೆದರಿಕೆ ಇರುವದಿಲ್ಲ, ಮಲಗಿದ ಮೇಲೆ ಸುಖವಾಗಿ ನಿದ್ರೆಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಗ ನೀನು ನಿರ್ಭಯದಿಂದ ಮಲಗಿಕೊಂಡು ಸುಖವಾಗಿ ನಿದ್ರಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀನು ಮಲಗುವಾಗ ನಿನಗೆ ಹೆದರಿಕೆ ಇರುವುದಿಲ್ಲ; ನೀನು ಮಲಗಿದಾಗ ನಿದ್ರೆಯು ಸುಖವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:24
21 ತಿಳಿವುಗಳ ಹೋಲಿಕೆ  

ಹಾಯಾಗಿ ಮಲಗಿ ನಿದ್ರಿಸುವೆನು I ಸುಖಿಯಾಗಿ ಮರಳಿ ಎದ್ದೇಳುವೆನು I ಕಾಯ್ದು ಕಾಪಾಡುವನು ಪ್ರಭು ನನ್ನನು II


ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II


ನಡೆಯುವಾಗ ಅವು ನಿನಗೆ ಮುಂದಾಳಾಗಿರುವುವು, ಮಲಗುವಾಗ ಅವು ನಿನ್ನನ್ನು ಕಾಯುವುವು, ಎಚ್ಚರಗೊಂಡಾಗ ಅವು ನಿನ್ನೊಡನೆ ಸಂವಾದಿಸುವುವು.


‘ಆಗ ನಾನು ನೋಡಿದೆ ಎಚ್ಚೆತ್ತು ನನ್ನ ಕನಸು ನನಗೆ ಮನೋಹರವಾಗಿತ್ತು.’


ಆಗ ನೀನು ವಿಶ್ರಮಿಸುವೆ ಹೆದರಿಕೆಯಿಲ್ಲದೆ ಅನೇಕರಿಗೆ ಬೇಕಾಗುವುದು ನಿನ್ನ ಮುಖಪ್ರಸನ್ನತೆ.


ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು.


ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II


ನಾನೇ ನನ್ನ ಕುರಿಗಳನ್ನು ಮೇಯಿಸಿ ಹಾಯಾಗಿ ಮಲಗುವಂತೆ ಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ.


ಹೆರೋದನು ಪೇತ್ರನನ್ನು ಜನರ ಮುಂದೆ ತರಬೇಕೆಂದಿದ್ದ ಹಿಂದಿನ ರಾತ್ರಿ ಅದು. ಪೇತ್ರನು ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಪಹರೆಯವರು ಸೆರೆಮನೆಯ ದ್ವಾರದಲ್ಲಿ ಕಾವಲಿದ್ದರು.


ದೃಢವಿದೆ ಅವನ ಮನ, ಎದೆಗುಂದನವನು I ಕಾಣುವನು ದುರುಳರಿಗಾಗುವ ದಂಡನೆಯನು II


ನನ್ನ ಮಾತಿಗೆ ಕಿವಿಗೊಡುವವರಾದರೋ ಸುರಕ್ಷಿತವಾಗಿರುವರು, ಕೇಡಿಗೆ ಭಯಪಡದೆ ನೆಮ್ಮದಿಯಾಗಿ ಬಾಳುವರು.


ದುಡಿಯುವವನು ಸ್ವಲ್ಪ ತಿಂದರೂ ಸರಿ, ಹೆಚ್ಚು ತಿಂದರೂ ಸರಿ, ಹಾಯಾಗಿ ನಿದ್ರಿಸುತ್ತಾನೆ. ಐಶ್ವರ್ಯವಂತನ ಸಂಪತ್ತಾದರೋ ಅವನಿಗೆ ನಿದ್ರೆ ಬರಲು ಬಿಡುವುದಿಲ್ಲ.


ಹೀಗೆ ದೇವ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳ ಭಯ ತಪ್ಪಿ, ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನ ಉಂಟಾಯಿತು.


ಶತ್ರುಗಳು ಸಾವಿರಾರಿದ್ದರೂ ನಾನವರಿಗಂಜೆನು II ಸುತ್ತುವರಿದು ಸನ್ನದ್ಧರಾಗಿದ್ದರೂ ಭಯಪಡೆನು II


ನೀನು ಅಂಜಬೇಕಾಗಿಲ್ಲ ಇರುಳಿನ ದುರಿತಕೆ I ಹಗಲಿನಲಿ ಹಾರಿಬರುವ ಬಿರುಸು ಬಾಣಕೆ II


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಜೀವಪ್ರಾಪ್ತಿ; ಅಂಥವನು ಸಂತುಷ್ಟನಾಗಿ ಬಾಳುವನು, ಅವನಿಗೆ ಕೇಡು ಸಂಭವಿಸದು.


ನ್ಯಾಯನೀತಿ ನಿನಗಾಧಾರ; ದೂರವಿರುವುದು ಹಿಂಸಾಚಾರ. ಭಯಭೀತಿಗೆ ನೀ ದೂರ, ಅವು ಬಾರವು ನಿನ್ನ ಹತ್ತಿರ.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ತೋಟದ ಮರಗಳು ಹಣ್ಣುಬಿಡುವುವು; ಹೊಲಗಳು ಒಳ್ಳೆಯ ಬೆಳೆಕೊಡುವುವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗಗಳನ್ನು ನಾನು ಮುರಿದುಹಾಕಿ, ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ, ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು