Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:3 - ಕನ್ನಡ ಸತ್ಯವೇದವು C.L. Bible (BSI)

3 ಪ್ರೀತಿ ಸತ್ಯತೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಪಟ್ಟಿಯಾಗಿರಲಿ, ಹೃದಯದಹಲಗೆಯಲ್ಲಿ ಲಿಖಿತವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪ್ರೀತಿಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪ್ರೀತಿಯೂ ನಂಬಿಗಸ್ತಿಕೆಯೂ ನಿನ್ನನ್ನು ಬಿಟ್ಟು ಹೋಗದಿರಲಿ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ, ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:3
23 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.


ಅವು ನಿನ್ನ ಬೆರಳಿಗೆ ಉಂಗುರವಾಗಿರಲಿ, ನಿನ್ನ ಹೃದಯದ ಹಲಗೆಯಲ್ಲಿ ಬರೆದಿರಲಿ.


“ಆ ದಿನಗಳು ಬಂದಮೇಲೆ ನಾನು ಅವರೊಡನೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು : ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ನಾಟಿಸುವೆನು; ಅವರ ಮನದಲ್ಲಿ ಬರೆಯುವೆನು.” ಎಂದು ಹೇಳಿದ ನಂತರವೇ,


ಅವನ್ನು ನಿರಂತರವಾಗಿ ಹೃದಯಕ್ಕೆ ಬಂಧಿಸಿಕೊ; ಕಂಠಾಭರಣವಾಗಿ ಕೊರಳಿಗೆ ಧರಿಸಿಕೊ.


ಸತ್ಯಬೋಧೆ ಅವರ ಬಾಯಲ್ಲಿ ನೆಲೆಸಿತ್ತು. ಅವರ ತುಟಿಗಳಿಂದ ಅಪರಾಧವಾದುದೇನೂ ಹೊರಬರಲಿಲ್ಲ. ಶಾಂತಿಯಿಂದ, ಸದ್ಧರ್ಮದಿಂದ ಅವರು ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡರು. ಹಲವರನ್ನು ಪಾಪಕ್ಕೆ ವಿಮುಖರಾಗಿಸಿದರು.


ಕಾರಣ -ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು.


ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.


ಪ್ರೀತಿಸತ್ಯತೆಗಳು ರಾಜನನ್ನು ಕಾಪಾಡುವ ಕವಚ; ಕರುಣೆಯೇ ಅವನ ಸಿಂಹಾಸನಕ್ಕೆ ಸ್ಥಿರಾಧಾರ.


ಅವು ನಿನ್ನ ತಲೆಗೆ ಸುಂದರ ಕಿರೀಟ, ನಿನ್ನ ಕೊರಳಿಗೆ ಕಂಠಾಭರಣ.


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ I ಆತನ ವಿಧಿ ನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ II


ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.


ಸರ್ವೇಶ್ವರ ಸ್ವಾಮಿ ಜುದೇಯದ ಜನರಿಗೆ ಹೀಗೆನ್ನುತ್ತಾರೆ : “ಜುದೇಯದ ಪಾಪವನ್ನು ಕಬ್ಬಿಣದ ಲೇಖನಿಯಿಂದ, ವಜ್ರದ ಮೊನೆಯಿಂದ ಬರೆಯಲಾಗಿದೆ. ಅದನ್ನು ನಿಮ್ಮ ಜನರ ಹೃದಯದ ಹಲಗೆಯ ಮೇಲೂ ಅವರ ಬಲಿಪೀಠಗಳ ಕೊಂಬುಗಳ ಮೇಲೂ ಕೆತ್ತಲಾಗಿದೆ.


ಜ್ಞಾಪಕಾರ್ಥವಾಗಿ ಅವುಗಳನ್ನು ನಿನ್ನ ಕೈಗೆ ಕಟ್ಟಿಕೊ; ಜ್ಞಾಪಕ ಪಟ್ಟಿಯಂತೆ ಹಣೆಗೆ ತೊಟ್ಟುಕೊ.


ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.


ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು; ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡುಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರನನ್ನು ಕರೆದುಕೊಂಡು ಹಿಂದಿರುಗಿ ಹೋಗು; ದೇವರ ಅನಂತ ಕೃಪೆ ನಿನ್ನ ಮೇಲಿರಲಿ,” ಎಂದು ಹೇಳಿದನು.


ಪ್ರೀತಿಯೂ ಸತ್ಯವೂ ಒಂದನ್ನೊಂದು ಕೂಡಿರುವುವು I ನೀತಿಯೂ ಶಾಂತಿಯೂ ಒಂದನ್ನೊಂದು ಚುಂಬಿಸುವುವು II


ಕೆಟ್ಟದ್ದನ್ನು ಕಲ್ಪಿಸುವವರು ಮಾರ್ಗಭ್ರಷ್ಟರು; ಒಳ್ಳೆಯದನ್ನು ಕಲ್ಪಿಸುವವರು ಮರ್ಯಾದಸ್ಥರು.


ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು