Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:34 - ಕನ್ನಡ ಸತ್ಯವೇದವು C.L. Bible (BSI)

34 ಅಪಹಾಸ್ಯಮಾಡುವವರನ್ನು ಆತ ಅಪಹಾಸ್ಯ ಮಾಡುವನು; ನಮ್ರರಿಗಾದರೋ ಕೃಪಾಶೀರ್ವಾದವನ್ನು ಅನುಗ್ರಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯಾರು ಗರ್ವದಿಂದ ಬೇರೆಯವರನ್ನು ಗೇಲಿಮಾಡುತ್ತಾರೋ ಅವರನ್ನು ಯೆಹೋವನೂ ಗೇಲಿಮಾಡುತ್ತಾನೆ. ದೀನರಿಗಾದರೋ ಆತನ ಕರುಣೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ದೇವರು ಗರ್ವಿಷ್ಠ ಪರಿಹಾಸ್ಯಗಾರರನ್ನು ಪರಿಹಾಸ್ಯ ಮಾಡುತ್ತಾರೆ; ದೀನರಿಗಾದರೋ ದೇವರು ಕೃಪೆಯನ್ನು ಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:34
12 ತಿಳಿವುಗಳ ಹೋಲಿಕೆ  

ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ನೀನು ಜ್ಞಾನವಂತನಾದರೆ ನಿನ್ನ ಜ್ಞಾನ ನಿನಗೇ ಲಾಭಕರ; ಕುಚೋದ್ಯಗಾರನು ಆದರೆ ಸವಿಯುವೆ ಅದರ ಪ್ರತೀಕಾರ.


ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು.


ಕುಚೋದ್ಯನಿಗೆ ಕಾದಿದೆ ನ್ಯಾಯತೀರ್ಪು; ದಡ್ಡನ ಬೆನ್ನಿಗೆ ಬೀಳಲಿದೆ ದೊಣ್ಣೆಪೆಟ್ಟು.


ಶುದ್ಧನಿಗಾತ ಪರಿಶುದ್ಧನು I ಮೂರ್ಖನಿಗಾತ ಮಹಾವಕ್ರನು II


ಪಾಪಪರಿಹಾರವನ್ನು ಪರಿಹಾಸ್ಯಮಾಡುತ್ತಾರೆ ಮೂರ್ಖರು; ಪಾಪಕ್ಷಮೆಯನ್ನು ಕೋರುತ್ತಾರೆ ಸತ್ಪುರುಷರು.


ಸೊಕ್ಕಿನವರ ಸಂಗಡ ಸೂರೆಹಂಚಿಕೊಳ್ಳುವುದಕ್ಕಿಂತಲು ದೀನದಲಿತರ ಸಂಗಡ ದೈನ್ಯದಿಂದಿರುವುದು ಮೇಲು.


ಆದುದರಿಂದ ಬಿರುಗಾಳಿಯಂತೆ ನಿಮಗೆ ಅಪಾಯಬಂದಾಗ, ತುಫಾನಿನಂತೆ ನಿಮಗೆ ಆಪತ್ತು ಬಂದೊದಗಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು