Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:6 - ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ನಡತೆಯಲ್ಲೆಲ್ಲಾ ನಿವೇದಿಸು ಆತನನ್ನು, ಆಗ ಸರಾಗಮಾಡುವನು ನಿನ್ನ ಮಾರ್ಗವನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ಎಲ್ಲಾ ನಡವಳಿಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿನ್ನ ಎಲ್ಲಾ ಕಾರ್ಯಗಳಲ್ಲಿ ಆತನನ್ನು ಜ್ಞಾಪಿಸಿಕೊ. ಆಗ ಆತನು ನಿನಗೆ ಸಹಾಯ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು. ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:6
27 ತಿಳಿವುಗಳ ಹೋಲಿಕೆ  

ನಿನ್ನ ಕಾರ್ಯಭಾರವನ್ನು ಸರ್ವೇಶ್ವರನಿಗೆ ವಹಿಸು; ಆಗ ಸಫಲವಾಗುವುದು ನಿನ್ನ ಯೋಜನೆಯು.


ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಮನುಷ್ಯ ಮನಬಂದಂತೆ ಮಾರ್ಗವನ್ನಾರಿಸಿಕೊಂಡರೂ ಸರ್ವೇಶ್ವರನೇ ಅವನ ನಡತೆಯನ್ನು ಪರಾಂಬರಿಸುವವನು.


ಸರ್ವೇಶ್ವರಾ, ಮಾನವನ ಗುರಿಸಾಧನೆ ಅವನ ಸ್ವಾಧೀನದಲ್ಲಿಲ್ಲ. ಸರಿದಿಸೆಯಲ್ಲಿ ಅವನು ಹೆಜ್ಜೆಯಿಡಲಾರನೆಂದು ನಿಮಗೆ ಗೊತ್ತಿದೆಯಲ್ಲಾ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


ನೀವು ಏನನ್ನು ಮಾಡಿದರೂ ಪೂರ್ಣಮನಸ್ಸಿನಿಂದ ಮಾಡಿ; ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಪ್ರಭುವನ್ನು ಮೆಚ್ಚಿಸುವುದಕ್ಕಾಗಿ ಮಾಡಿ.


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಪಾಪಿಗಳನ್ನು ನೋಡಿ ಅಸೂಯೆಪಡಬೇಡ; ಸರ್ವೇಶ್ವರನಲ್ಲಿರಲಿ ನಿರಂತರ ಭಯಭಕ್ತಿ.


ಅದಕ್ಕೆ ನನ್ನ ಉತ್ತರ ಇದು: ನೀವು ಉಂಡರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿ.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಆಗ ದಾವೀದನು ಸರ್ವೇಶ್ವರನನ್ನು, “ನಾನು ಆ ದಾಳಿಕಾರರನ್ನು ಬೆನ್ನಟ್ಟಬಹುದೇ? ಅವರು ನನಗೆ ವಶವಾಗುವರೇ?” ಎಂದು ಕೇಳಿದನು. “ಬೆನ್ನಟ್ಟು, ಅವರು ನಿನ್ನ ವಶವಾಗುವರು, ನೀನು ನಿನ್ನವರೆಲ್ಲರನ್ನೂ ಬಿಡಿಸಿಕೊಂಡು ಬರುವೆ,” ಎಂದು ಉತ್ತರಕೊಟ್ಟನು ಸರ್ವೇಶ್ವರ.


ಧರ್ಮಸಾಧನೆಗಾಗಿ ಕೋರೆಷನನ್ನು ಉದಯಗೊಳಿಸಿರುವೆನು ಅವನ ಮಾರ್ಗಗಳನ್ನು ನಾನೇ ಸರಾಗಮಾಡುವೆನು ನನ್ನ ನಗರವನು ಪುನರ್ ನಿರ್ಮಾಣಮಾಡುವನು ಅವನು ಸೆರೆಯಾದ ನನ್ನ ಜನರನು ಬಿಡುಗಡೆ ಮಾಡುವನು ಸಂಬಳವನ್ನಾಗಲಿ ಸಂಭಾವನೆಯನ್ನಾಗಲಿ ಸ್ವೀಕರಿಸನು. ಇದ ನುಡಿದಿರುವೆನು ಸೇನಾಧೀಶ್ವರ ಸರ್ವೇಶ್ವರನಾದ ನಾನು.”


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ಆಗ ರಾಜ, “ನಿನ್ನ ಆಶೆಯೇನು?,” ಎಂದು ಕೇಳಿದನು. ನಾನು ಪರಲೋಕ ದೇವರನ್ನು ಪ್ರಾರ್ಥಿಸಿ, ಅವನಿಗೆ, “ರಾಜರ ಚಿತ್ತವಿರುವುದಾದರೆ,


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.


ಒಂದೊಂದು ವೇಳೆ ಆ ಮೇಘ ಕೆಲವು ದಿವಸ ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಸರ್ವೇಶ್ವರನ ಆಜ್ಞಾನುಸಾರ ಅವರು ಹಾಗೆಯೇ ಇಳಿದುಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞಾನುಸಾರವಾಗಿಯೇ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಡುತ್ತಿದ್ದರು.


ಹೀಗಿರಲು, ನಾನು ನನ್ನ ದೇವರ ಪ್ರೇರಣೆಯಿಂದ ಶ್ರೀಮಂತರನ್ನು, ಅಧಿಕಾರಿಗಳನ್ನು ಹಾಗು ಜನಸಾಮಾನ್ಯರನ್ನು ಜನಗಣತಿಗಾಗಿ ಸಭೆಸೇರಿಸಿದೆ. ಆಗ ಜೆರುಸಲೇಮಿಗೆ ಮೊದಲು ಹಿಂದಿರುಗಿ ಬಂದವರ ಹೆಸರುಗಳ ಪಟ್ಟಿ ನನಗೆ ಸಿಕ್ಕಿತು. ಅದರಲ್ಲಿ ಹೀಗೆ ಬರೆದಿತ್ತು:


ನಿರ್ದೋಷಿಯ ಮಾರ್ಗ ಸರಾಗ; ದುಷ್ಟತನದಿಂದ ದುರುಳನ ಪತನ.


ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಾವು ನಡೆಯಬೇಕಾದ ಮಾರ್ಗವನ್ನೂ ಕೈಗೊಳ್ಳಬೇಕಾದ ಕಾರ್ಯವನ್ನೂ ತೋರಿಸುವಂತೆ ನಮಗಾಗಿ ಪ್ರಾರ್ಥಿಸಬೇಕು. ಅಳಿದುಳಿದಿರುವ ಈ ಎಲ್ಲ ಜನರಿಗಾಗಿ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪ್ರಾರ್ಥಿಸಬೇಕು. ನಿಮ್ಮ ಕಣ್ಣಿಗೆ ಕಾಣುವಂತೆ ಹೇರಳವಾದ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ,” ಎಂದು ವಿಜ್ಞಾಪಿಸಿದರು.


ನೇರವಾಗಿದೆ ಸಜ್ಜನನ ದಾರಿ ಸುಗಮವಾಗಿದೆ ನಿನ್ನಿಂದ ಆತನ ಹಾದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು