Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:7 - ಕನ್ನಡ ಸತ್ಯವೇದವು C.L. Bible (BSI)

7 ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನೇ ಬುದ್ಧಿವಂತನು ಎಂದೆಣಿಸದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನ್ನನ್ನು ಜ್ಞಾನಿಯೆಂದು ಪರಿಗಣಿಸಿಕೊಳ್ಳದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದರಿಂದ ದೂರವಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ; ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:7
19 ತಿಳಿವುಗಳ ಹೋಲಿಕೆ  

ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.


ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತ ಮೂಢನ ಸುಧಾರಣೆ ಹೆಚ್ಚು ಸಾಧ್ಯ.


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ತಮ್ಮ ದೃಷ್ಟಿಯಲ್ಲಿ ತಾವೇ ಜ್ಞಾನಿಗಳೆಂದು ತಮ್ಮ ಗಣನೆಯಲ್ಲಿ ತಾವೇ ವಿವೇಕಿಗಳೆಂದು ಭಾವಿಸುವವರಿಗೆ ಧಿಕ್ಕಾರ !


ಸರ್ವೇಶ್ವರನಲ್ಲಿ ಭಯಭಕ್ತಿಯು ಜೀವಜಲದ ಚಿಲುಮೆಯು; ಮರಣಪಾಶದಿಂದ ತಪ್ಪಿಸಿಕೊಳ್ಳಲು ಅದುವೆ ಸಾಧನವು.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ


ಅದಕ್ಕೆ ಮೋಶೆ, “ಭಯಪಡಬೇಡಿ; ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ ಬಂದಿದ್ದಾರೆ; ಹೀಗೆ ದೈವಭೀತಿ ನಿಮ್ಮ ಕಣ್ಮುಂದಿದ್ದು ನೀವು ಪಾಪಮಾಡದೆ ಇರುವಿರಿ,” ಎಂದನು.


ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಸರ್ವೇಶ್ವರನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು.


ದುಡ್ಡಿನಾಸೆಗಾಗಿಯೆ ದುಡಿಯಬೇಡ; ಬುದ್ಧಿಯನ್ನೆಲ್ಲಾ ಅದಕ್ಕಾಗಿಯೇ ವ್ಯಯಮಾಡಬೇಡ.


ಮೂಢನಿಗೆ ಅವನ ಮೂರ್ಖತನ ತಿಳಿಯುವಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.


ಹಣವಂತ ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವನು; ವಿವೇಕಿಯಾದ ಬಡವ ಅವನೆಂಥವನೆಂದು ಅರ್ಥಮಾಡಿಕೊಳ್ಳುವನು.


ತನ್ನ ಶಕ್ತಿಯಲ್ಲೆ ಭರವಸೆ ಇಡುವವನು ಮೂಢನು; ಜ್ಞಾನಿಗಳ ಮಾರ್ಗದಲ್ಲಿ ನಡೆವವನು ವಿಮುಕ್ತನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು