Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:8 - ಕನ್ನಡ ಸತ್ಯವೇದವು C.L. Bible (BSI)

8 ಆಗ ನಿನಗೆ ದೇಹಾರೋಗ್ಯ ದೊರಕುವುದು, ನಿನ್ನ ಎಲುಬುಗಳಿಗೆ ಶಕ್ತಿಸಾರತ್ವ ಸಿಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ, ಎಲುಬುಗಳಿಗೆ ಸಾರವೂ ಉಂಟಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಉಂಟಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ಹೀಗೆ ಮಾಡುವುದಾದರೆ, ಅದು ನಿನ್ನ ದೇಹಕ್ಕೆ ಒಳ್ಳೆಯ ಆರೋಗ್ಯವನ್ನೂ ನಿನ್ನ ಎಲುಬುಗಳಿಗೆ ಹೊಸ ಶಕ್ತಿಯನ್ನೂ ಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿನ್ನ ದೇಹಕ್ಕೆ ಅದು ಆರೋಗ್ಯವನ್ನು ತರುವುದು; ನಿನ್ನ ಎಲುಬುಗಳಿಗೆ ಅದು ಪೋಷಣೆಯನ್ನೂ ತರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:8
8 ತಿಳಿವುಗಳ ಹೋಲಿಕೆ  

ಕಂಡುಹಿಡಿಯಬಲ್ಲವನಿಗೆ ಅವು ಜೀವದಾಯಕ; ಇಡೀ ದೇಹಕ್ಕೆ ಅವು ಆರೋಗ್ಯಕರ.


ವಾಸಿಮಾಡುವನು ಮುರಿದ ಮನಸ್ಸುಳ್ಳವರನು I ಕಟ್ಟಿ ಗುಣಪಡಿಸುವನು ಅವರ ಗಾಯಗಳನು II


ಅವನ ದೇಹ ಬೆಳೆದು ಕೊಬ್ಬೇರಿರುತ್ತದೆ ಅವನ ಅಸ್ತಿಗಳ ಮಜ್ಜೆ ಸಾರವತ್ತಾಗಿರುತ್ತದೆ.


ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.


ಅಂಗಾಲಿನಿಂದ ನಡುನೆತ್ತಿಯವರೆಗೆ ಪೆಟ್ಟು ಬಾಸುಂಡೆ, ಮಾಗದ ಗಾಯಗಳೇ ಹೊರತು ಮತ್ತೇನೂ ಅಲ್ಲ. ಅವನ್ನು ತೊಳೆದು ಕಟ್ಟಿಲ್ಲ. ಎಣ್ಣೆ ಸವರಿ ಮೃದುವಾಗಿಸಿಲ್ಲ.


ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು