ಜ್ಞಾನೋಕ್ತಿಗಳು 30:17 - ಕನ್ನಡ ಸತ್ಯವೇದವು C.L. Bible (BSI)17 ತಂದೆಯನ್ನು ಪರಿಹಾಸ್ಯಮಾಡುವ ಕಣ್ಣನ್ನು, ತಾಯಿಯ ಆಜ್ಞೆಯನ್ನು ಧಿಕ್ಕರಿಸುವ ನೇತ್ರವನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವುವು, ರಣಹದ್ದುಗಳು ತಿಂದುಬಿಡುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು ಧಿಕ್ಕರಿಸುವವನ ಕಣ್ಣನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ತನ್ನ ತಂದೆಯನ್ನು ಹಾಸ್ಯಮಾಡಿ, ತನ್ನ ತಾಯಿಯನ್ನು ಧಿಕ್ಕರಿಸುವ ಕಣ್ಣನ್ನು, ಕಣಿವೆಯ ಕಾಗೆಗಳು ಕಿತ್ತು ಕಕ್ಕುವವು. ರಣಹದ್ದುಗಳು ಅದನ್ನು ತಿಂದುಬಿಡುವವು. ಅಧ್ಯಾಯವನ್ನು ನೋಡಿ |
“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.