Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:2 - ಕನ್ನಡ ಸತ್ಯವೇದವು C.L. Bible (BSI)

2 ಮಾನವರಲ್ಲಿ ನನ್ನಂಥ ಪಶುಪ್ರಾಯನಿಲ್ಲ; ಮನುಷ್ಯ ವಿವೇಕವೂ ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ, ಮಾನುಷ ವಿವೇಕವು ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು. ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ! ಮಾನುಷವಿವೇಕವು ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಬೇರೆಯವರಿಗಿಂತ ದಡ್ಡನಾಗಿರುವೆ. ಸರ್ವಸಾಮಾನ್ಯವಾದ ಬುದ್ಧಿಯೂ ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಖಂಡಿತವಾಗಿಯೂ ನಾನು ಮನುಷ್ಯನಲ್ಲ, ಮೃಗ. ನನಗೆ ಮನುಷ್ಯನ ಗ್ರಹಿಕೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:2
14 ತಿಳಿವುಗಳ ಹೋಲಿಕೆ  

ನಾ ಮಂದಮತಿಯಾಗಿದ್ದೆ ಅರಿವಿಲ್ಲದೆ I ನಾ ವನ್ಯಮೃಗನಂತಿದ್ದೆ ನಿನ್ನ ಮುಂದೆ II


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಯಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


“ಅಕಟಕಟಾ ಶಿಸ್ತನ್ನೇ ನಾನು ದ್ವೇಷಿಸಿದೆನಲ್ಲಾ! ನನಗೆ ಕೊಡಲಾದ ತಿದ್ದುಪಾಟನ್ನು ತಾತ್ಸಾರಮಾಡಿದೆನಲ್ಲಾ!


ಇದನರಿಯನು ಪಶುಪ್ರಾಯನು I ಇದ ತಿಳಿಯನು ಬುದ್ಧಿಹೀನನು II


ಬುದ್ಧಿಜೀವಿಗಳೂ ಸಾಯುವುದು ಖಂಡಿತ I ಮೂರ್ಖ, ಮಂದಗತಿಗಳ ಅಳಿವೂ ನಿಶ್ಚಿತ I ಅವರ ಸೊತ್ತು ಪರರ ಪಾಲು, ಇದೂ ಖಚಿತ II


ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.


ಮಸ್ಸಾಗೆ ಸೇರಿದ ಜಾಕೆ ಎಂಬುವವನ ಮಗ ಆಗೂರನ ಹಿತೋಕ್ತಿಗಳು: ಈತನು ಇಥಿಯೇಲನಿಗೆ ಹಾಗೂ ಉಕ್ಕಾಲನಿಗೆ ಮಾಡಿದ ಪ್ರವಾದನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು