Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:30 - ಕನ್ನಡ ಸತ್ಯವೇದವು C.L. Bible (BSI)

30 ಯಾವುದಕ್ಕೂ ಹೆದರಿ ಓರೆಯಾಗದ ಮೃಗರಾಜನಾದ ಸಿಂಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾವದಕ್ಕೂ ಹೆದರಿ ಓರೆಯಾಗದ ಮೃಗರಾಜನಾದ ಸಿಂಹ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಸಿಂಹವು ಎಲ್ಲಾ ಪ್ರಾಣಿಗಳಲ್ಲಿ ಅತಿ ಬಲಿಷ್ಠವಾದದ್ದು; ಅದು ಯಾವುದಕ್ಕೂ ಭಯಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮೃಗಗಳಲ್ಲಿ ಬಲಿಷ್ಠವಾಗಿರುವ ಸಿಂಹವು, ಯಾವುದಕ್ಕೂ ಹಿಮ್ಮೆಟ್ಟದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:30
7 ತಿಳಿವುಗಳ ಹೋಲಿಕೆ  

ಅವರು ಏಳನೆಯ ದಿನ ಸೂರ್ಯಾಸ್ತಮಾನಕ್ಕೆ ಮೊದಲೇ ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು” ಸಿಂಹಕ್ಕಿಂತ ಕ್ರೂರವಾದದ್ದು ಯಾವುದು?” ಎಂದು ಹೇಳಿದರು. ಅವನು, “ನೀವು ನನ್ನ ಕಡಸಿನಿಂದ ಉಳದಿದ್ದರೆ ಒಗಟನ್ನು ಬಿಡಿಸಲು ನಿಮ್ಮಿಂದಾಗುತ್ತಿರಲಿಲ್ಲ,” ಎಂದನು.


ಈ ಜನಾಂಗ ಯುವಸಿಂಹದಂತೆ ನಿಂತಿಹುದು ಮೃಗೇಂದ್ರನಂತೆ ಮೃಗ ಕೊಂದು, ರಕ್ತ ಕುಡಿದು, ಮಾಂಸ ತಿಂದು, ತೃಪ್ತಿಹೊಂದದ ಹೊರತು ಆ ಸಿಂಹ ವಿರಮಿಸದು.”


ಸೌಮ್ಯರು, ಅತಿಪ್ರಿಯರು, ಆ ಸೌಲ-ಯೋನಾತಾನರು ಬಾಳಿನಲು, ಸಾವಿನಲು ಬಿಟ್ಟಗಲದವರು. ಹದ್ದಿಗಿಂತ ಅಧಿಕ ವೇಗ ಅವರದು ಸಿಂಹಕ್ಕಿಂತ ಹೆಚ್ಚಿನ ಶಕ್ತಿ ಅವರದು!


ಗಂಭೀರ ಗಮನದ ಮೂರು ಪ್ರಾಣಿಗಳುಂಟು: ಹೌದು ಗಂಭೀರ ಗತಿಯ ನಾಲ್ಕನೆಯ ಪ್ರಾಣಿಯೂ ಉಂಟು:


ಕತ್ತೆತ್ತಿ ನಡೆಯುವ ಹುಂಜ, ಮಂದೆಗೆ ಮುಂದೆ ಹೋಗುವ ಹೋತ, ಸೈನ್ಯಸಮೇತನಾದ ರಾಜ.


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನನ್ನು ಕುರಿತು ಶೋಕಗೀತೆಯೊಂದನ್ನು ನುಡಿ : “ನೀನು ಮೃಗರಾಜನೆನಿಸಿಕೊಂಡಿರುವೆ ಜನಾಂಗಗಳಲ್ಲಿ, ಇಗೋ ದೊಡ್ಡ ಮೊಸಳೆಯಾಗಿಬಿಟ್ಟಿರುವೆ ಮಹಾನದಿಯಲ್ಲಿ. ನೀನಿದ್ದ ನದಿಗಳ ಭೇದಿಸಿಕೊಂಡು ಬಂದು, ಕಾಲಿಂದ ನೀ ಕಲಕಿರುವೆ ಅದರ ನೀರನ್ನು, ತುಳಿದು ಬದಿಮಾಡಿರುವೆ ಜನಾಂಗವೆಂಬ ಹೊಳೆಯನ್ನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು