Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:5 - ಕನ್ನಡ ಸತ್ಯವೇದವು C.L. Bible (BSI)

5 ದೇವರ ಒಂದೊಂದು ಮಾತೂ ಪರಿಶುದ್ಧ; ಆತನೇ ಶರಣರ ಖೇಡ್ಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು; ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ಹೇಳುವ ಪ್ರತಿಯೊಂದು ಮಾತೂ ನಂಬಿಕೆಗೆ ಯೋಗ್ಯವಾಗಿದೆ. ತನ್ನ ಬಳಿಗೆ ಬರುವ ಜನರಿಗೆ ದೇವರು ಆಶ್ರಯದುರ್ಗವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ದೇವರ ಪ್ರತಿಯೊಂದು ಮಾತು ದೋಷವಿಲ್ಲದ್ದು; ದೇವರಲ್ಲಿ ಭರವಸವಿಡುವವನಿಗೆ ಅವರು ಗುರಾಣಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:5
17 ತಿಳಿವುಗಳ ಹೋಲಿಕೆ  

ದೇವರ ಮಾರ್ಗ ದೋಷರಹಿತ I ಸರ್ವೇಶ್ವರನ ವಚನ ಪರಮಪುನೀತ I ಆಶ್ರಿತರೆಲ್ಲರಿಗಾತ ರಕ್ಷಣಾಕವಚ II


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಪ್ರಭುವಿನ ಈ ವಾಗ್ದಾನ ಪ್ರಮಾಣಬದ್ಧ I ಏಳ್ಮಡಿ ಪುಟಕ್ಕಿಟ್ಟ ಬೆಳ್ಳಿಯಷ್ಟು ಶುದ್ಧ II


ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II


ನಿನ್ನ ನುಡಿಯೊಂದೊಂದೂ ಪರಮ ಪರಿಶೋಧಿತ I ಅದರ ಮೇಲಿದೆ ನಿನ್ನ ದಾಸನಿಗೆ ಬಹುಮೋದ II


ನಾನಾತನಿಗೆ, ‘ನೀನೇ ನನ್ನ ರಕ್ಷಕನೂ I ದುರ್ಗವೂ ನಾ ನಂಬಿದ ದೇವನು’ ಎನ್ನುವೆನು II


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಧರ್ಮಶಾಸ್ತ್ರ ಪವಿತ್ರವಾದುದು. ಅಂತೆಯೇ, ಆಜ್ಞೆಯೂ ಪವಿತ್ರವಾದುದು. ನ್ಯಾಯವಾದುದು ಮತ್ತು ಹಿತಕರವಾದುದು.


ಆತನೇ ನನಗೆ ಬಂಡೆ, ಕೋಟೆ, ದುರ್ಗ, ಉದ್ಧಾರಕ I ನನಗೆ ರಕ್ಷಾಕವಚ, ಆಶ್ರಯ, ಶತ್ರು ವಿಧ್ವಂಸಕ II


ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II


ದೇವರ ಮಾರ್ಗ ದೋಷರಹಿತ ಸರ್ವೇಶ್ವರನ ವಚನ ಪರಮಪುನೀತ ಆಶ್ರಿತರೆಲ್ಲರಿಗಾತ ರಕ್ಷಣಾಕವಚ.


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಜ್ಞಾನವನ್ನು ಸಜ್ಜನರಿಗೆ ಸೇರಿಸಿಡುವನಾತ, ಸನ್ಮಾರ್ಗಿಗಳಿಗೆ ಕವಚವಾಗಿರುವನಾತ.


ಪ್ರಭುವಲ್ಲದೆ ಇನ್ನಾವ ದೇವರುಂಟು? I ನಮ್ಮ ದೇವನಲ್ಲದೆ ಉದ್ಧಾರಕನೆಲ್ಲುಂಟು? II


ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು