Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:7 - ಕನ್ನಡ ಸತ್ಯವೇದವು C.L. Bible (BSI)

7 ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ: ನಿರಾಕರಿಸಬೇಡ, ನಾನು ಸಾಯುವುದರೊಳಗೆ ಅವುಗಳನ್ನು ಅನುಗ್ರಹಿಸು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ; ಅನುಗ್ರಹಿಸದಿರಬೇಡ, ನಾನು ಸಾಯುವದರೊಳಗಾಗಿ ಅವುಗಳನ್ನು ಕೈಗೂಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ, ನಾನು ಸಾಯುವ ಮೊದಲು ನೀನು ನನಗೋಸ್ಕರ ಎರಡು ಕಾರ್ಯಗಳನ್ನು ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಯೆಹೋವ ದೇವರೇ, ನಾನು ನಿಮ್ಮನ್ನು ಎರಡು ವಿಷಯಗಳನ್ನು ಕೇಳುತ್ತೇನೆ. ನಿರಾಕರಿಸಬೇಡಿ ನಾನು ಸಾಯುವ ಮೊದಲು ಅವೆರಡನ್ನು ಅನುಗ್ರಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:7
7 ತಿಳಿವುಗಳ ಹೋಲಿಕೆ  

ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು.


ಆತನ ಮನದಾಸೆಯನು ನೀ ಪೂರೈಸಿದೆ I ಆತನಧರ ಬಯಕೆಯನು ಅನುಗ್ರಹಿಸಿದೆ II


ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಇಲ್ಲವಾದರೆ ಆತ ನಿನ್ನನ್ನು ಖಂಡಿಸಿಯಾನು, ನೀನು ಸುಳ್ಳುಗಾರನಾಗಿ ತೋರಿಬಂದೀಯೆ!


ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು