Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:9 - ಕನ್ನಡ ಸತ್ಯವೇದವು C.L. Bible (BSI)

9 ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹಾಗಾಗದೆ ಹೊಟ್ಟೆತುಂಬಿದವನಾದರೆ ಯೆಹೋವನು ಯಾರೋ ಎಂದು ನಿನ್ನನ್ನು ತಿರಸ್ಕರಿಸೇನು; ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ, ‘ಯೆಹೋವ ದೇವರು ಯಾರು?’ ಎಂದು ಹೇಳೇನು. ನಾನು ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:9
26 ತಿಳಿವುಗಳ ಹೋಲಿಕೆ  

ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.


ನಾನು ಪ್ರಮಾಣಮಾಡಿ ಕೊಟ್ಟ ನಾಡಿಗೆ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ನಾಡಿಗೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿ, ನನ್ನನ್ನು ತಾತ್ಸಾರಮಾಡಿ, ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಗೀತೆ ಇವರ ಸಂತತಿಯವರ ಬಾಯಲ್ಲಿದ್ದು ಅವರ ಮುಂದೆ ಸಾಕ್ಷಿಕೊಡುವುದು,” ಎಂದು ಹೇಳಿದರು.


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಆಗ ಪೇತ್ರನು ತನ್ನನ್ನೇ ಶಪಿಸಿಕೊಳ್ಳಲಾರಂಭಿಸಿ, “ಆ ಮನುಷ್ಯನನ್ನು ನಾನು ಖಂಡಿತವಾಗಿ ಅರಿಯೆನು,” ಎಂದು ಆಣೆಯಿಟ್ಟು ಹೇಳಿದನು.


ಪೇತ್ರನು, “ಆ ಮನುಷ್ಯ ಯಾರೋ ನಾನರಿಯೆ,” ಎಂದು ಆಣೆಯಿಟ್ಟು ಇನೊಮ್ಮೆ ನಿರಾಕರಿಸಿದನು.


ಬಳಿಕ ಎಲ್ಲಾ ಜನರಿಗೆ, “ಇಗೋ, ನೋಡಿ ಈ ಕಲ್ಲು! ಇದು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಸರ್ವೇಶ್ವರ ನಮಗೆ ಹೇಳಿದ ಎಲ್ಲ ಮಾತುಗಳನ್ನು ಇದು ಕೇಳಿದೆ.


ಚೋರರ ಮಿತ್ರ ಸ್ವಂತ ಪ್ರಾಣಕ್ಕೆ ಶತ್ರು, ಶಾಪ ಕಿವಿಗೆ ಬೀಳುತ್ತಿದ್ದರೂ ಆತ ಮೌನ ತಾಳುವನು.


“ಈ ಕೆಳಕಂಡ ಸಂದರ್ಭಗಳಲ್ಲಿ ಪಾಪಪರಿಹಾರಕ ಬಲಿಗಳನ್ನು ಒಪ್ಪಿಸಬೇಕಾಗುತ್ತದೆ: ಒಬ್ಬನು ತಾನು ಕಂಡು ಕೇಳಿದ್ದಕ್ಕೆ ನ್ಯಾಯಸ್ಥಾನದಲ್ಲಿ ಸಾಕ್ಷಿಹೇಳಬೇಕೆಂದು ಅಧಿಕೃತವಾದ ಕರೆಯಿದ್ದರೂ ಸಾಕ್ಷಿ ಹೇಳದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.


ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


ಇದು ಕಾವಲುಗಾರ ದೂತನ ತೀರ್ಮಾನ; ಹಾಗು ದೇವರ ತೀರ್ಪು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದರ ಆಳ್ವಿಕೆಯನ್ನು ಅವರು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಕನಿಷ್ಠರನ್ನೂ ಆ ಪದವಿಗೆ ನೇಮಿಸುತ್ತಾರೆ. ಇದು ಎಲ್ಲಾ ಜನರಿಗೆ ತಿಳಿದಿರಬೇಕೆಂಬುದೇ ಈ ತೀರ್ಮಾನ,' ಎಂದು ಸಾರಿದನು.


ಸಜ್ಜನರ ನಾಡಿನಲಿ ಉಳಿಯದು ದುರ್ಜನರ ದಬ್ಬಾಳಿಕೆ I ಉಳಿಯಿತಾದರೆ ಸಜ್ಜನರೂ ಕೈಹಚ್ಚಬಹುದು ಅಕ್ರಮಕೆ II


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ಆ ಜನರು ಸರ್ವೇಶ್ವರ ಸ್ವಾಮಿಯನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ. ‘ನೀನು ನನ್ನನ್ನು ಮರೆತು, ನನಗೆ ಬೆನ್ನುಮಾಡಿದ್ದರಿಂದ ನಿನ್ನ ಲಂಪಟತನದ ಮತ್ತು ಸೂಳೆತನದ ಫಲವನ್ನು ಅನುಭವಿಸಬೇಕು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು