Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:15 - ಕನ್ನಡ ಸತ್ಯವೇದವು C.L. Bible (BSI)

15 ಇನ್ನೂ ಕತ್ತಲಿರುವಾಗಲೆ ಎದ್ದುಬಿಡುತ್ತಾಳೆ, ಮನೆಯವರಿಗೆ ತಿಂಡಿತೀರ್ಥ ಅಣಿಮಾಡುತ್ತಾಳೆ, ಕೆಲಸಗಿತ್ತಿಯರಿಗೆ ದಿನಗೆಲಸಗಳನ್ನು ನೇಮಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇನ್ನೂ ಕತ್ತಲಿರುವಾಗಲೇ ಎದ್ದು, ಮನೆಯವರಿಗೆ ಆಹಾರವನ್ನು, ನೀಡುವಳು ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇನ್ನೂ ಕತ್ತಲಿರುವಾಗಲೇ ಎದ್ದು ಮನೆಯವರಿಗೆ ತೀನಿಯನ್ನಿಕ್ಕಿ ತೊತ್ತುಗಳಿಗೆ ದಿನದ ಬತ್ಯವನ್ನು ಹಂಚುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇನ್ನೂ ಕತ್ತಲಿರುವಾಗಲೇ ಆಕೆ ಎದ್ದೇಳುವಳು. ತನ್ನ ಕುಟುಂಬದವರಿಗೂ ತನ್ನ ಸೇವಕಿಯರಿಗೂ ಊಟ ಕೊಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇನ್ನೂ ಕತ್ತಲಿರುವಾಗಲೇ ಆಕೆಯು ಏಳುವಳು; ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು, ತನ್ನ ದಾಸಿಯರಿಗೆ ದಿನದ ಕೆಲಸವನ್ನು ಹಂಚುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:15
10 ತಿಳಿವುಗಳ ಹೋಲಿಕೆ  

ಪ್ರಭುವಿನ ಸೇವೆಯಲ್ಲಿ ಆಲಸಿಗಳಾಗದೆ ಅತ್ಯಾಸಕ್ತರಾಗಿರಿ.


ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ.


ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.


ನಿದ್ದೆಯಲ್ಲೆ ನಿರತನಾಗಿರಬೇಡ, ಬಡವನಾಗಿ ಬಿಡುವೆ. ಕಣ್ಣು ತೆರೆದು ದುಡಿ, ಹೊಟ್ಟೆತುಂಬ ಊಟ ಪಡೆವೆ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಅವರ ಪಿತೃಗಳ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ, ತಮ್ಮ ದೂತರ ಮುಖಾಂತರ ಅವರನ್ನು ಎಚ್ಚರಿಸುತ್ತಾ ಬಂದರು.


ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಅವನೊಂದಿಗೆ ಇಸ್ರಯೇಲರು ಎಲ್ಲರೂ ಶಿಟ್ಟೀಮನ್ನು ಬಿಟ್ಟು ಜೋರ್ಡನ್ನಿನ ಹತ್ತಿರಕ್ಕೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.


ಎಚ್ಚರಿಕೆ! ನಾನು ನಿಮಗೆ ಮುಂಚಿತವಾಗಿಯೇ ಇದನ್ನು ತಿಳಿಸುತ್ತಾ ಇದ್ದೇನೆ.


ಆಲೋಚನೆಮಾಡಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ಕೈಗೆಲಸದ ಆದಾಯದಿಂದಲೆ ತೋಟ ಮಾಡಿಸುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು