Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:16 - ಕನ್ನಡ ಸತ್ಯವೇದವು C.L. Bible (BSI)

16 ಆಲೋಚನೆಮಾಡಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ಕೈಗೆಲಸದ ಆದಾಯದಿಂದಲೆ ತೋಟ ಮಾಡಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು, ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೊಲವನ್ನು ನೋಡಿ, ಯೋಚಿಸಿ ಕೊಂಡುಕೊಳ್ಳುವಳು; ತನ್ನ ಕೈಗೆಲಸದ ಲಾಭದಿಂದ ತೋಟಮಾಡಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಕೆ ಜಮೀನನ್ನು ಕೊಂಡುಕೊಳ್ಳುವಳು; ಗಳಿಸಿದ ಹಣವನ್ನು ದ್ರಾಕ್ಷಿತೋಟಕ್ಕೆ ಉಪಯೋಗಿಸುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಕೆಯು ಹೊಲವನ್ನು ನೋಡಿ, ಅದನ್ನು ಕೊಂಡುಕೊಳ್ಳುತ್ತಾಳೆ. ತನ್ನ ಕೈಕೆಲಸದ ಆದಾಯದಿಂದ ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:16
6 ತಿಳಿವುಗಳ ಹೋಲಿಕೆ  

“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.


ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯ ನಿನಗೇ ಇರಲಿ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ. ಆದರೆ ನನ್ನ ದ್ರಾಕ್ಷಾತೋಟ ನನ್ನ ವಶದಲೇ ಇರಲಿ.


ಆಕೆ ಮನೆ ಸೇರಿದಾಗ ತನ್ನ ತಂದೆಯ ಬಳಿ ಭೂಮಿಯನ್ನು ಕೇಳಬೇಕೆಂದು ಒತ್ನಿಯೇಲನು ಅವಳನ್ನು ಪ್ರೋತ್ಸಾಹಿಸಿದನು. ಅಂತೆಯೇ ಅವಳು ಹೊರಟು ಹೇಸರಗತ್ತೆ ಮೇಲಿಂದ ಇಳಿದದ್ದೇ ಕಾಲೇಬನು, “ನಿನಗೇನು ಬೇಕು?” ಎಂದು ಕೇಳಿದನು.


ಇನ್ನೂ ಕತ್ತಲಿರುವಾಗಲೆ ಎದ್ದುಬಿಡುತ್ತಾಳೆ, ಮನೆಯವರಿಗೆ ತಿಂಡಿತೀರ್ಥ ಅಣಿಮಾಡುತ್ತಾಳೆ, ಕೆಲಸಗಿತ್ತಿಯರಿಗೆ ದಿನಗೆಲಸಗಳನ್ನು ನೇಮಿಸುತ್ತಾಳೆ.


ನಡುಕಟ್ಟಿ ಕೆಲಸಕ್ಕೆ ನಿಲ್ಲುತ್ತಾಳೆ, ದುಡಿಮೆಯಲ್ಲಿ ತೋಳ್ಬಲವನ್ನು ತೋರ್ಪಡಿಸುತ್ತಾಳೆ.


ಬುದ್ಧಿವಂತೆ ತನ್ನ ಮನೆಯನ್ನು ಕಟ್ಟೆಬ್ಬಿಸುತ್ತಾಳೆ; ಬುದ್ಧಿಹೀನೆ ಅದನ್ನು ಕೈಯಿಂದ ಕೆಡವಿಹಾಕುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು