Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:20 - ಕನ್ನಡ ಸತ್ಯವೇದವು C.L. Bible (BSI)

20 ಬಡವರಿಗೆ ಕೈಬಿಚ್ಚಿ ಕೊಡುತ್ತಾಳೆ; ದಿಕ್ಕಿಲ್ಲದವರಿಗೆ ಕೈಚಾಚಿ ನೀಡುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಡವರಿಗಾಗಿ ಕೈ ಬಿಚ್ಚಿ, ದಿಕ್ಕಿಲ್ಲದವರಿಗೆ ಕೈ ನೀಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬಡವರಿಗಾಗಿ ಕೈ ಬಿಚ್ಚಿ ದಿಕ್ಕಿಲ್ಲದವರಿಗೆ ಕೈ ನೀಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಕೆ ಯಾವಾಗಲೂ ಬಡವರಿಗೆ ಕೊಡುವಳು; ಕೊರತೆಯಲ್ಲಿರುವ ಜನರಿಗೆ ಸಹಾಯ ಮಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಕೆಯು ಬಡವರಿಗಾಗಿ ಕೈ ಬಿಚ್ಚಿ ಕೊಡುತ್ತಾಳೆ. ಹೌದು, ದಿಕ್ಕಿಲ್ಲದವರಿಗೆ ದಾನ ಮಾಡುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:20
17 ತಿಳಿವುಗಳ ಹೋಲಿಕೆ  

ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.


ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.


ದಿಕ್ಕಿಲ್ಲದವನನು ಲಕ್ಷಿಸುವವನು ಧನ್ಯನು I ಆಪತ್ಕಾಲದಲಿ ಆದವನನು ಪ್ರಭು ರಕ್ಷಿಸುವನು II


ನಾಡಿನಲ್ಲಿ ಯಾವಾಗಲೂ ಬಡವರು ಇದ್ದೇ ಇರುವರು; ಆದುದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕೆಂದು ಆಜ್ಞಾಪಿಸಿದ್ದೇನೆ.


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ಆದರೆ ಇಸ್ರಯೇಲರನ್ನು ಕುರಿತು: “ಅವಿಧೇಯರೂ ಪ್ರತಿಭಟಿಸುವವರೂ ಆದ ಈ ಜನಾಂಗವನ್ನು ದಿನವೆಲ್ಲಾ ನಾನು ಕೈಚಾಚಿ ಕರೆದೆ,” ಎಂದು ಪ್ರವಾದಿಸಿದ್ದಾನೆ.


ಬಡಬಗ್ಗರು ನಿಮ್ಮ ಸಂಗಡ ಯಾವಾಗಲೂ ಇರುತ್ತಾರೆ. ಅವರಿಗೆ ಯಾವಾಗ ಬೇಕಾದರೂ ನೀವು ಸಹಾಯ ಮಾಡಬಹುದು. ಆದರೆ ನಾನು ನಿಮ್ಮ ಸಂಗಡ ಯಾವಾಗಲೂ ಇರುವುದಿಲ್ಲ.


ನಾನು ನಿಮ್ಮನ್ನು ಕರೆದಾಗ ತಿರಸ್ಕರಿಸಿದಿರಿ. ನಾನು ನಿಮಗೆ ಕೈ ನೀಡಿದಾಗ ಗಮನಿಸದೆ ಹೋದಿರಿ.


ರಾಟೆಯನ್ನು ತಾನೆ ಆಡಿಸುತ್ತಾಳೆ; ಕದಿರನ್ನು ಕೈಯಿಂದ ಹಿಡಿಯುತ್ತಾಳೆ.


ಅಂಥವನನು ಪ್ರಭು ಜೀವದಿಂದಿರಿಸುವನು, ಸುರಕ್ಷಿತವಾಗಿಡುವನು I ನಾಡಿನಲ್ಲವನನು ಧನ್ಯನಾಗಿಸುವನು, ಶತ್ರುಗಳಿಗಧೀನನಾಗಿಸನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು