Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:23 - ಕನ್ನಡ ಸತ್ಯವೇದವು C.L. Bible (BSI)

23 ಆಕೆಯ ಗಂಡ ನಾಡಿಗರಲ್ಲಿ ಗಣ್ಯ; ನ್ಯಾಯಸ್ಥಾನದಲ್ಲಿ ಸನ್ಮಾನಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಕೆಯ ಪತಿಯು ನ್ಯಾಯಸ್ಥಾನದಲ್ಲಿ, ದೇಶದ ಹಿರಿಯರ ಮಧ್ಯದಲ್ಲಿ ಕುಳಿತಿರುವಾಗ ಪ್ರಸಿದ್ಧನಾಗಿ ಕಾಣುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಕೆಯ ಪತಿಯು ನ್ಯಾಯಸ್ಥಾನದಲ್ಲಿ ದೇಶದ ಹಿರಿಯರ ಮಧ್ಯೆ ಕೂತಿರುವಾಗ ಪ್ರಸಿದ್ಧನಾಗಿ ಕಾಣುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಜನರು ಆಕೆಯ ಗಂಡನನ್ನು ಗೌರವಿಸುವರು. ಅವನು ದೇಶದ ಹಿರಿಯರುಗಳಲ್ಲಿ ಒಬ್ಬನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಕೆಯ ಪತಿಯು ಪಟ್ಟಣದಲ್ಲಿ ಸನ್ಮಾನಿತ. ದೇಶದ ಹಿರಿಯರ ಮಧ್ಯದಲ್ಲಿ ಪ್ರಸಿದ್ಧನಾಗಿ ಕುಳಿತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:23
8 ತಿಳಿವುಗಳ ಹೋಲಿಕೆ  

ಗುಣವಂತ ಸತಿ ಗಂಡನ ತಲೆಗೆ ಕಿರೀಟ; ಲಜ್ಜೆಗೆಟ್ಟ ಹೆಂಡತಿ ಆತನ ಎಲುಬಿಗೆ ಕ್ಷಯ.


ಇತ್ತ ಬೋವಜನು ಊರಿನ ಸಭಾಮಂಟಪದ ಬಳಿ ಹೋಗಿ ಅಲ್ಲಿ ಕುಳಿತುಕೊಂಡನು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


ಜ್ಞಾನವು ಮೂರ್ಖನಿಗೆ ಎಟುಕದಷ್ಟು ಎತ್ತರ; ನ್ಯಾಯಸ್ಥಾನದಲ್ಲಿ ಅವನು ಬಾಯಿಬಿಡಲಾರ.


ನಾನು ಊರ ಮುಂದಿನ ಚಾವಡಿಗೆ ಹೋದಾಗ ಚೌಕದ ಪೀಠದಲ್ಲಿ ಕುಳಿತುಕೊಂಡಾಗ,


ಆಗ ಊರಿನ ಹಿರಿಯರು ಮತ್ತು ನೆರೆದಿದ್ದ ಸಭಿಕರು: “ಹೌದು, ನಾವೆಲ್ಲರೂ ಸಾಕ್ಷಿಗಳು. ಇಸ್ರಯೇಲಿನ ಮನೆತನವನ್ನು ವೃದ್ಧಿಗೊಳಿಸಿದ ರಾಹೆಲ್ ಮತ್ತು ಲೆಯಾ ಎಂಬ ಕುಲೀನೆಯರನ್ನು ಸರ್ವೇಶ್ವರ ಆಶೀರ್ವದಿಸಲಿ! ಎಫ್ರಾತ ಕುಲದಲ್ಲಿ ಧನವಂತನಾಗು;


ತಂದೆತಾಯಿಗಳು ಅವನನ್ನು ಹಿಡಿದು ಊರಬಾಗಿಲಿಗೆ ಹಿರಿಯರ ಮುಂದೆ ತರಬೇಕು.


ಅಷ್ಟರಲ್ಲಿ, ಬೋವಜನು ಮುಂಚೆ ಹೇಳಿದ್ದ ಎಲಿಮೆಲೆಕನಿಗೆ ಹತ್ತಿರದ ನೆಂಟನಾಗಿದ್ದವನು ಅಲ್ಲಿಗೆ ಬಂದನು. ಆಗ ಬೋವಜನು ಅವನಿಗೆ: “ಬಾರಪ್ಪಾ, ಇಲ್ಲಿ ಕುಳಿತುಕೊ,” ಎಂದು ಕರೆಯಲು, ಅವನು ಬಂದು ಪಕ್ಕದಲ್ಲೇ ಕುಳಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು