Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:25 - ಕನ್ನಡ ಸತ್ಯವೇದವು C.L. Bible (BSI)

25 ಘನತೆ, ಗೌರವ, ಆಕೆಯ ಬಟ್ಟೆಬರೆ; ಭವಿಷ್ಯತ್ತಿನಲ್ಲಿ ಆಕೆಗೆ ನಿರ್ಭೀತ ನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಬಲವನ್ನು, ತೇಜಸ್ಸನ್ನು ಹೊದ್ದುಕೊಂಡಿರುವಳು, ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬಲವನ್ನೂ ತೇಜಸ್ಸನ್ನೂ ಹೊದ್ದುಕೊಂಡಿರುವಳು; ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಕೆಯು ಶಕ್ತಿಯನ್ನೂ ಗಾಂಭೀರ್ಯವನ್ನೂ ಪ್ರದರ್ಶಿಸುವಳು; ಹರ್ಷದಿಂದ ಭವಿಷ್ಯತ್ತನ್ನು ಎದುರುನೋಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಕೆಯ ಉಡುಪು ಬಲವೂ ಘನತೆಯೂ ಆಗಿವೆ. ಭವಿಷ್ಯತ್ತಿನ ಭಯವಿಲ್ಲದೆ ಆಕೆಯು ನಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:25
13 ತಿಳಿವುಗಳ ಹೋಲಿಕೆ  

ಮಹಿಮೆ ಘನತೆಗಳಿಂದ ಅಲಂಕರಿಸಿಕೊ! ಗೌರವ ಪ್ರಭಾವಗಳನು ಧರಿಸಿಕೊ!


ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.


ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಇದು ದೇವರ ಅನುರೂಪದಲ್ಲಿ ನಿರ್ಮಿತವಾದ ಸ್ವಭಾವ; ದೇವರೊಂದಿಗೆ ಸತ್ಸಂಬಂಧವುಳ್ಳ ಹಾಗೂ ನೈಜವಾದ ಪಾವನ ಸ್ವಭಾವ.


ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು.


ಅವರು ಮಿತಿಮೀರಿದ ಕೇಶಾಲಂಕಾರ, ಆಭರಣಾಲಂಕಾರ, ವಸ್ತ್ರಾಲಂಕಾರಗಳಿಂದ ತಮ್ಮನ್ನೇ ಶೃಂಗರಿಸಿಕೊಳ್ಳುವುದರ ಬದಲು ದೈವಭಕ್ತೆಯರಾದ ಸ್ತ್ರೀಯರಿಗೆ ಲಕ್ಷಣವಾದ ಸತ್ಕಾರ್ಯಗಳಿಂದ ಅಲಂಕರಿಸಿಕೊಳ್ಳಲಿ.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ನೀತಿಭೂಷಿತರಾಗಲಿ ನಿನ್ನ ಯಾಜಕರು I ಆನಂದ ಘೋಷಮಾಡಲಿ ನಿನ್ನ ಭಕ್ತಜನರು II


ಹೊದಿಸುವೆನಿದರ ಯಾಜಕರಿಗೆ ರಕ್ಷಣಾವಸ್ತ್ರವನು I ಸಾಧುಸಂತರು ಮಾಡುವರಿದರ ಹರ್ಷೋದ್ಗಾರವನು II


ಅಂತೆಯೇ, ಮಹಿಳೆಯರು, ಸಭ್ಯತೆಯನ್ನು ಮೀರದೆ ಘನತೆ, ಗೌರವಕ್ಕೆ ಒಪ್ಪುವಂತಹ ಉಡುಪನ್ನು ಧರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು