Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:26 - ಕನ್ನಡ ಸತ್ಯವೇದವು C.L. Bible (BSI)

26 ಆಕೆಯ ಬಾಯಿಂದ ಬರುವ ಮಾತು ಜ್ಞಾನಪೂರ್ಣ; ಆಕೆ ಹೇಳುವ ಬುದ್ಧಿಮಾತು ಪ್ರೀತಿಪ್ರೇರಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿಪೂರ್ವಕವಾಗಿ ಹೇಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿ ಪೂರ್ವಕವಾಗಿ ಹೇಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆಕೆಯು ಜ್ಞಾನದಿಂದ ಮಾತಾಡುವಳು; ಪ್ರೀತಿಯಿಂದ ಸದುಪದೇಶ ಮಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಕೆಯು ಜ್ಞಾನದಿಂದ ಮಾತನಾಡುತ್ತಾಳೆ. ಆಕೆಯ ನಾಲಿಗೆಯ ಮೇಲೆ ನಂಬಿಗಸ್ತ ಶಿಕ್ಷಣ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:26
28 ತಿಳಿವುಗಳ ಹೋಲಿಕೆ  

ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.


ಸಜ್ಜನರ ಬಾಯಲ್ಲಿ ಜ್ಞಾನ ಮೊಳೆಯುವುದು; ನೀಚನ ನಾಲಿಗೆಯೂ ಕತ್ತರಿಸಿ ಹೋಗುವುದು.


ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


ಸಹನಶೀಲತೆಯಿಂದ ಅರಸನನ್ನೂ ಒಲಿಸಿಕೊಳ್ಳಬಹುದು; ಮೃದುವಾದ ನಾಲಿಗೆ ಎಲುಬನ್ನೂ ಮುರಿಯಬಲ್ಲದು.


ಅಂತೆಯೇ ಸ್ತ್ರೀಯರೇ, ನೀವು ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯವನ್ನು ನಂಬದೆ ಇರಬಹುದು. ಆದರೂ ಯಾವ ಮಾತುಕತೆಯಿಲ್ಲದೆ ನಿಮ್ಮ ಸನ್ನಡತೆಯಿಂದಲೇ ಅವರನ್ನು ಜಯಿಸಬಹುದು.


ಸತ್ಯಬೋಧೆ ಅವರ ಬಾಯಲ್ಲಿ ನೆಲೆಸಿತ್ತು. ಅವರ ತುಟಿಗಳಿಂದ ಅಪರಾಧವಾದುದೇನೂ ಹೊರಬರಲಿಲ್ಲ. ಶಾಂತಿಯಿಂದ, ಸದ್ಧರ್ಮದಿಂದ ಅವರು ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡರು. ಹಲವರನ್ನು ಪಾಪಕ್ಕೆ ವಿಮುಖರಾಗಿಸಿದರು.


ದೇವರನ್ನು ಕಣ್ಣಾರೆ ಕಂಡೆವಲ್ಲಾ!” ಎಂದನು. ಆಕೆ ಅವನಿಗೆ, “ಸರ್ವೇಶ್ವರ ನಮ್ಮನ್ನು ಕೊಲ್ಲಬೇಕೆಂದಿದ್ದರೆ ಅವರು ನಮ್ಮ ಕೈಯಿಂದ ಬಲಿಯನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ. ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಹೇಳುತ್ತಿರಲಿಲ್ಲ,” ಎಂದಳು.


ನಾನು ತಮಗೋಸ್ಕರ ಮಾಡಿಸಲಿರುವ ಔತಣಕ್ಕೆ ನಾಳೆಯೂ ಹಾಮಾನನೊಂದಿಗೆ ದಯಮಾಡಿಸಬೇಕು. ಆಗ ತಾವು ಹೇಳಿದಂತೆ ನಾನು ಮಾಡುವೆನು. ಇದೇ ನನ್ನ ದೈನ್ಯ ಮನವಿ,” ಎಂದು ಉತ್ತರವಿತ್ತಳು.


ಇವನು ಪ್ರಾರ್ಥನಾಮಂದಿರದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದಾಗ, ಪ್ರಿಸ್ಸಿಲ ಮತ್ತು ಅಕ್ವಿಲರು ಅವನ ಬೋಧನೆಯನ್ನು ಕೇಳಿದರು. ಅವನನ್ನು ಮನೆಗೆ ಕರೆದುಕೊಂಡು ಹೋಗಿ ಪ್ರಭುವಿನ ಮಾರ್ಗವನ್ನು ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.


ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.


ಆಗ ಮರಿಯಳು "ಇಗೋ, ನಾನು ದೇವರ ದಾಸಿ. ನೀವು ಹೇಳಿದಂತೆ ನನಗಾಗಲಿ,” ಎಂದಳು. ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.


ನನ್ನ ವಧುವೇ, ಜೇನು ಸುರಿಯುತ್ತಿದೆ ನಿನ್ನ ತುಟಿಗಳಿಂದ ಹಾಲುಜೇನು ಬರುತ್ತಿದೆ ನಿನ್ನ ನಾಲಗೆಯಡಿಯಿಂದ ಲೆಬನೋನಿನ ಸುಗಂಧ ಸೂಸುತ್ತಿದೆ ನಿನ್ನ ಉಡುಪಿನಿಂದ.


ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!


ಎಸ್ತೇರಳ ದಾಸಿಯರೂ ಕಂಚುಕಿಗಳೂ ಈ ವಿಷಯವನ್ನು ಆಕೆಗೆ ತಿಳಿಸಿದಾಗ ಆಕೆ ಬಹು ವ್ಯಸನಾಕ್ರಾಂತಳಾದಳು. ಉಟ್ಟ ಗೋಣಿತಟ್ಟನ್ನು ತೆಗೆದುಹಾಕಿ, ವಸ್ತ್ರಗಳನ್ನು ಧರಿಸಿಕೊಳ್ಳುವಂತೆ ಮೊರ್ದೆಕೈಗೆ ಉಡುಪನ್ನು ಕಳುಹಿಸಿಕೊಟ್ಟಳು. ಅವನಾದರೋ ಅವುಗಳನ್ನು ಸ್ವೀಕರಿಸಲಿಲ್ಲ.


ಮನೆಗೆಲಸವನ್ನೆಲ್ಲ ಚೆನ್ನಾಗಿ ನೋಡಿಕೊಳ್ಳುತ್ತಾಳೆ; ಆಕೆ ಕೆಲಸಮಾಡದೆ ಊಟಮಾಡುವವಳಲ್ಲ.


ಮನೆಮಾರು, ಆಸ್ತಿಪಾಸ್ತಿ ಬರುತ್ತವೆ ಪಿತ್ರಾರ್ಜಿತವಾಗಿ; ವಿವೇಕಿಯಾದ ಹೆಂಡತಿ ಸಿಕ್ಕುವುದು ಸರ್ವೇಶ್ವರನ ಅನುಗ್ರಹವಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು