Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:4 - ಕನ್ನಡ ಸತ್ಯವೇದವು C.L. Bible (BSI)

4 ಕುಡುಕತನ ರಾಜನಿಗೆ ತಕ್ಕುದ್ದಲ್ಲ; ಲೆಮೂವೇಲನೇ ಕೇಳು, ಅದು ರಾಜನಿಗೆ ಯೋಗ್ಯವಲ್ಲ; ಮದ್ಯಪಾನಾಸಕ್ತಿ ಅಧಿಕಾರಿಗಳಿಗೆ ಹಿತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದ್ರಾಕ್ಷಾರಸವನ್ನು ಕುಡಿಯುವದು ರಾಜರಿಗೆ ಯೋಗ್ಯವಲ್ಲ; ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ; ಮದ್ಯವೆಲ್ಲಿ ಎನ್ನುವದು ಪ್ರಭುಗಳಿಗೆ ವಿಹಿತವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಲೆಮೂವೇಲನೇ, ರಾಜರುಗಳು ಮದ್ಯವನ್ನು ಕುಡಿಯುವುದು ಒಳ್ಳೆಯದಲ್ಲ. ಮದ್ಯಪಾನ ಆಳುವವರಿಗೆ ಒಳ್ಳೆಯದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಲೆಮೂವೇಲನೇ, ಕುಡುಕತನವು ರಾಜರಿಗಾಗಿ ಅಲ್ಲ, ದ್ರಾಕ್ಷಾರಸ ಕುಡಿಯುವದು ರಾಜರಿಗೆ ಯೋಗ್ಯವಲ್ಲ. ಮದ್ಯಪಾನ ಅಧಿಕಾರಿಗಳಿಗೆ ಯೋಗ್ಯವಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:4
16 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸದಿಂದ ನಗೆಯಾಟ, ಮಧ್ಯದಿಂದ ಕೂಗಾಟ; ಇವುಗಳಿಂದ ತೂರಾಟಕ್ಕೆ ತುತ್ತಾಗುವವನು ಜ್ಞಾನಿಯಲ್ಲ.


ಸುರಾಪಾನದಲ್ಲಿ ಶೂರರಾಗಿ, ಮದ್ಯಮಿಶ್ರಣದಲ್ಲಿ ಸಾಹಸಿಗಳಾಗಿ ಇರುವವರಿಗೆ ಧಿಕ್ಕಾರ !


ನಾಡೇ, ನಿನ್ನ ಒಡೆಯ ಕುಲೀನನಾಗಿದ್ದು, ನಿನ್ನ ನಾಯಕರೆಲ್ಲ ಸಕಾಲದಲ್ಲಿ ಊಟಮಾಡಿ, ಕುಡುಕರಾಗುವುದರ ಬದಲು ಶಕ್ತಿಯುತರಾದರೆ, ಅದು ನಿನ್ನ ಸೌಭಾಗ್ಯವೇ ಸರಿ.


ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.


ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೆ ಅಂಚೆಯವರು ರಾಜಾಜ್ಞೆಯ ಮೇರೆಗೆ ತ್ವರಿತವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಮದ್ಯಪಾನ ಮಾಡಲು ಕುಳಿತುಕೊಂಡನು. ಅತ್ತ ಶೂಷನ್ ನಗರದಲ್ಲಿ ಎಲ್ಲೆಲ್ಲೂ ತಳಮಳ ಉಂಟಾಯಿತು.


ತನ್ನ ರಾಜರುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ, ಪಟ್ಟಣಕ್ಕೆ ಲಗ್ಗೆ ಹತ್ತುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.


ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರುದ್ಧ ಒಳಸಂಚು ಮಾಡಿದನು. ಒಮ್ಮೆ ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿದ್ದನು.


ಏಳನೆಯ ದಿನ ಅರಸ ಅಹಷ್ವೇರೋಷನು ಮಧುಪಾನ ಮಾಡಿ ಆನಂದ ಲಹರಿಯಲ್ಲಿದ್ದಾಗ ಬಹುಸುಂದರಿಯಾದ ತನ್ನ


ನೀನು ಸಮುದ್ರ ಮಧ್ಯದಲ್ಲಿ ಮಲಗಿ ಇರುವವನಂತೆ ಇರುವೆ, ಹಡಗಿನ ಕಂಬದ ತುದಿಯಲ್ಲಿ ನಿದ್ರಿಸುವವನಂತೆ ಇರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು