Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:9 - ಕನ್ನಡ ಸತ್ಯವೇದವು C.L. Bible (BSI)

9 ಅವರ ಪರವಾಗಿ ಮಾತಾಡಿ ನ್ಯಾಯವಾದ ತೀರ್ಪುಕೊಡು; ದೀನದರಿದ್ರರ ಹಕ್ಕು ಬಾಧ್ಯತೆಯನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಾಯನ್ನು ತೆರೆದು ನ್ಯಾಯವನ್ನು ತೀರಿಸು, ದೀನದರಿದ್ರರ ವ್ಯಾಜ್ಯ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬಾಯಿ ತೆರೆದು ಧರ್ಮವನ್ನು ನಡಿಸು, ದೀನದರಿದ್ರರಿಗೆ ನ್ಯಾಯವನ್ನು ತೀರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸತ್ಯವಾದವುಗಳ ಪರವಾಗಿ ನಿಂತುಕೋ. ಜನರಿಗೆಲ್ಲಾ ನ್ಯಾಯವಾದ ತೀರ್ಪನ್ನು ಮಾಡು. ಬಡಜನರ ಮತ್ತು ಕೊರತೆಯಲ್ಲಿರುವವರ ಹಕ್ಕುಗಳನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರ ಪರವಾಗಿ ಮಾತನಾಡಿ, ನೀತಿನ್ಯಾಯವನ್ನು ಸ್ಥಾಪಿಸು. ಬಡವರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ಹಕ್ಕುಬಾಧ್ಯತೆಯನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:9
30 ತಿಳಿವುಗಳ ಹೋಲಿಕೆ  

ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.


“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.


ಆ ನ್ಯಾಯಾಧಿಪತಿಗಳಿಗೆ ನಾನು ಆಗ ಕೊಟ್ಟ ಸೂಚನೆ ಇದು: ‘ನೀವು ಸರ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅದು ಇಸ್ರಯೇಲರ ವ್ಯಾಜ್ಯವಾಗಿರಬಹುದು. ಅನ್ಯರೊಡನೆ ವ್ಯಾಜ್ಯವಾಗಿರಬಹುದು. ಎಲ್ಲವನ್ನು ನೀವು ನ್ಯಾಯದ ಪ್ರಕಾರವೇ ತೀರ್ಮಾನಿಸಬೇಕು.


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ರಾಜರಲ್ಲಿ ದುಷ್ಟಕಾರ್ಯ ಖಂಡನೀಯ; ಸದಾಚಾರ ಸಿಂಹಾಸನಕ್ಕೆ ನಿಜ ಆಧಾರ.


ಏಕೆಂದರೆ ಮೊರೆಯಿಡುತ್ತಿದ್ದ ಬಡವನನು ಗತಿಯಿಲ್ಲದ ಅನಾಥನನು ಆದರಿಸುತ್ತಿದ್ದೆ ನಾನು.


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಬರೀ ತೋರಿಕೆಯಿಂದ ತೀರ್ಪುಕೊಡುವುದು ಸಲ್ಲದು; ನಿಮ್ಮ ತೀರ್ಪು ನ್ಯಾಯಬದ್ಧವಾಗಿರಬೇಕು,” ಎಂದು ಹೇಳಿದರು.


:ಸತ್ಯಾನುಸಾರ ನ್ಯಾಯತೀರಿಸಿರಿ.


ರಾಜನು ನ್ಯಾಯಾಸನದ ಮೇಲೆ ವಿರಾಜಿಸುವಾಗ ಕೆಟ್ಟತನವನ್ನು ತೂರಿಬಿಡುವನು ದೃಷ್ಟಿಯಿಂದ.


ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.


ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿದನು. “ಒಡೆಯರಾದ ತಾವು ತಮ್ಮ ಸೇವಕ ದಾವೀದನಿಗೆ ಅನ್ಯಾಯ ಮಾಡಬಾರದು; ಅವನು ನಿಮಗೆ ದ್ರೋಹ ಮಾಡಲಿಲ್ಲ; ಅವನು ಮಾಡಿದ್ದೆಲ್ಲವು ನಿಮ್ಮ ಹಿತಕ್ಕಾಗಿಯೇ.


ಅದಕ್ಕೆ ಯೋನಾತಾನನು, “ಅವನು ಏಕೆ ಸಾಯಬೇಕು? ಅವನು ಏನು ಮಾಡಿದ್ದಾನೆ?” ಎಂದು ತಂದೆಯನ್ನು ಕೇಳಿದನು.


ನೀತಿವಂತನು ದಲಿತರ ಹಕ್ಕುಬಾಧ್ಯತೆಯನ್ನು ಕಾದಿರಿಸುವನು; ದುಷ್ಟರಿಗಿಲ್ಲ ಅದನ್ನು ಗ್ರಹಿಸುವಷ್ಟು ಅಕ್ಕರೆ.


ಅಬಲರಿಗೆ, ಅನಾಥರಿಗೆ ದೊರಕಿಸಿರಿ ನ್ಯಾಯವನು I ಕಾದಿರಿಸಿರಿ ದೀನದಲಿತರ ಹಕ್ಕು ಬಾಧ್ಯತೆಯನು II


‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು