Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:13 - ಕನ್ನಡ ಸತ್ಯವೇದವು C.L. Bible (BSI)

13 ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸದುಪದೇಶವನ್ನು ಗ್ರಹಿಸಿಕೋ, ಸಡಿಲಬಿಡಬೇಡ, ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸದುಪದೇಶವನ್ನು ಹಿಡಿ, ಸಡಿಲಬಿಡಬೇಡ; ಅದನ್ನು ಕಾಪಾಡಿಕೋ, ಅದೇ ನಿನ್ನ ಜೀವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಉಪದೇಶಗಳನ್ನು ಯಾವಾಗಲೂ ನೆನಪುಮಾಡಿಕೊ; ಮರೆತುಬಿಡಬೇಡ. ಅವು ನಿನಗೆ ಜೀವವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ; ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:13
20 ತಿಳಿವುಗಳ ಹೋಲಿಕೆ  

ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.


ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!


ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು.


ಅವುಗಳನ್ನೆಲ್ಲಾ ಪರಿಶೋಧಿಸಿ ಒಳ್ಳೆಯದನ್ನು ಅಂಗೀಕರಿಸಿ,


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.


ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ಅವರನ್ನು ಬಿಟ್ಟ ತುಸು ಹೊತ್ತಿನಲ್ಲೆ ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ. ತಾಯ ಮನೆಗೆ, ನನ್ನ ಹೆತ್ತವಳ ಮನೆಗೆ ಕರೆದೊಯ್ದೆ ಕೈಯ ಬಿಡದೆಯೆ ಕರೆದುಕೊಂಡು ಹೋದೆ.


ಧನವು ಹೇಗೋ ಹಾಗೆ ಜ್ಞಾನವೂ ಆಶ್ರಯ; ಜ್ಞಾನದ ವೈಶಿಷ್ಟ್ಯವೆಂದರೆ ಅದು ಜ್ಞಾನಿಗೆ ಜೀವದಾಯಕ.


ಅವು ನಿನ್ನಾತ್ಮಕ್ಕೆ ಜೀವಪ್ರದಾನವಾಗಿವೆ, ನಿನ್ನ ಕೊರಳಿಗೆ ಭೂಷಣವಾಗಿವೆ.


ಆ ಪುರುಷ, “ನನ್ನನ್ನು, ಹೋಗಬಿಡು, ಬೆಳಗು ಆಗುತ್ತಿದೆ,” ಎನ್ನಲು ಯಕೋಬನು, “ನೀವು ನನ್ನನ್ನು ಆಶೀರ್ವದಿಸಿದ ಹೊರತು, ನಿಮ್ಮನ್ನು ಹೋಗಬಿಡುವುದಿಲ್ಲ,” ಎಂದನು.


ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.


ಏಕೆಂದರೆ ಆಜ್ಞೆಯೇ ಜ್ಯೋತಿ, ಬೋಧನೆಯೇ ಬೆಳಕು, ಶಿಸ್ತಿನಿಂದ ಕೂಡಿದ ಶಿಕ್ಷಣವೇ ಜೀವನಕ್ಕೆ ಮಾರ್ಗ.


ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಳ್ಳುವನು ಸರ್ವೇಶ್ವರನ ಕೃಪಾಕಟಾಕ್ಷಕ್ಕೆ ಪಾತ್ರನಾಗುವನು.


ಶಿಸ್ತನ್ನು ಕೈಗೊಳ್ಳುವವನು ಜೀವಮಾರ್ಗದಲ್ಲಿರುವನು; ತಿದ್ದುಪಾಟನ್ನು ತಿರಸ್ಕರಿಸುವವನು ದಾರಿ ತಪ್ಪುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು