Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:16 - ಕನ್ನಡ ಸತ್ಯವೇದವು C.L. Bible (BSI)

16 ಕೇಡು ಮಾಡದಿದ್ದರೆ ಆ ದುರುಳರಿಗೆ ನಿದ್ರೆಬಾರದು, ವಂಚಿಸಿ ಬೀಳಿಸದಿದ್ದರೆ ಅವರಿಗೆ ನಿದ್ರೆ ಹತ್ತದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕೇಡುಮಾಡದಿದ್ದರೆ ಅವರಿಗೆ ನಿದ್ರೆಹತ್ತದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಏನಾದರೂ ಕೇಡುಮಾಡದಿದ್ದರೆ ಕೆಡುಕರಿಗೆ ನಿದ್ರೆಬಾರದು. ಯಾರಿಗಾದರೂ ನೋವು ಮಾಡದೆ ಅವರು ನಿದ್ರಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು; ಯಾರನ್ನಾದರೂ ಬೀಳಿಸದಿದ್ದರೆ, ಅವರಿಗೆ ನಿದ್ರೆ ಹತ್ತುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:16
13 ತಿಳಿವುಗಳ ಹೋಲಿಕೆ  

ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II


ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


“ಆದರೆ, ದುರುಳರು ಅಲ್ಲೋಲಕಲ್ಲೋಲವಾದ ಸಮುದ್ರದಂತೆ ಇದ್ದಾರೆ. ಅದು ಸುಮ್ಮನಿರದು - ಅದರ ಅಲೆಗಳು ಕೆಸರನ್ನೂ ಕೊಳಚೆಯನ್ನೂ ಕಕ್ಕುತ್ತಾ ಇರುತ್ತದೆ.


ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!


ಅವರ ಕಾಲು ಕೇಡನ್ನು ಹಿಂಬಾಲಿಸಿ ಓಡುತ್ತವೆ ರಕ್ತಪಾತಕ್ಕಾಗಿ ಅವರು ತುಡಿಯುತ್ತಿರುತ್ತಾರೆ.


ಅಷ್ಟರಲ್ಲಿ ಬೆಳಗಾಯಿತು. ಪ್ರಜಾಪ್ರಮುಖರೂ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸಭೆ ಸೇರಿದರು. ಯೇಸುವನ್ನು ತಂದು ನ್ಯಾಯಸಭೆಯ ಮುಂದೆ ನಿಲ್ಲಿಸಿದರು.


ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.


ಆ ದುರ್ಮಾರ್ಗದಿಂದ ಓರೆಯಾಗು, ದೂರವಾಗು; ಅದರಲ್ಲಿ ನಡೆಯದೆ ಮುಂದಕ್ಕೆ ಸಾಗು.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ಅವನ ಕೀಳು ಬಾಯಿಯ ತುಂಬ ಕೇಡು ಕಪಟ I ಸನ್ಮತಿ ಸತ್ಕಾರ್ಯಗಳನ್ನು ಬಿಟ್ಟೇಬಿಟ್ಟ II


ಅವರು ಸಂತೋಷಿಸುವುದು ಕೇಡನ್ನು ಮಾಡುವುದರಲ್ಲಿ. ಉಲ್ಲಾಸಿಸುವುದು ಕೆಟ್ಟವರ ದುಷ್ಟತನದಲ್ಲಿ,


ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.


ಆದರೆ, ಸಹಸ್ರಾಧಿಪತಿ ಲೂಸಿಯನು ಮಧ್ಯೆಬಂದು ಬಲಾತ್ಕಾರದಿಂದ ಇವನನ್ನು ನಮ್ಮಿಂದ ಬಿಡಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು