Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:17 - ಕನ್ನಡ ಸತ್ಯವೇದವು C.L. Bible (BSI)

17 ದುಷ್ಟತನವೇ ಅವರಿಗೆ ಅನ್ನ ಆಹಾರ; ಹಿಂಸಾಚಾರವೇ ಅವರಿಗೆ ಮದುಪಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದುಷ್ಟತನವೇ ಅವರ ಆಹಾರ; ಬಲಾತ್ಕಾರವೇ ಅವರ ದ್ರಾಕ್ಷಾರಸ ಪಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದುಷ್ಟತನವೇ ಅವರ ಅನ್ನ; ಬಲಾತ್ಕಾರವೇ ಅವರ ದ್ರಾಕ್ಷಾರಸಪಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವರು ಬೇರೆಯವರಿಗೆ ಕೇಡನ್ನಾಗಲಿ ನೋವನ್ನಾಗಲಿ ಮಾಡದೆ ಜೀವಿಸಲಾರರು. ಅದೇ ಅವರ ಆಹಾರ ಮತ್ತು ಪಾನೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರಿಗೆ ದುಷ್ಟತನವೇ ಆಹಾರ, ಬಲಾತ್ಕಾರವೇ ಅವರಿಗೆ ದ್ರಾಕ್ಷಾರಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:17
17 ತಿಳಿವುಗಳ ಹೋಲಿಕೆ  

ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.


ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ? I ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? I


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.


ವಂಚಿಸಿ ಪಡೆದ ಊಟ ಬಲು ರುಚಿ; ಆಮೇಲೆ ಬಾಯಿ ತುಂಬ ಕಲ್ಲುಜಲ್ಲಿ.


“ಕದ್ದ ನೀರು ಸಿಹಿ, ಗುಟ್ಟಾಗಿ ತಿನ್ನುವ ರೊಟ್ಟಿ ರುಚಿ” ಎಂದು ಬುದ್ಧಿಹೀನನಿಗೆ ಹೇಳುವಳು.


ಸಜ್ಜನರ ಊಟ ಫಲಹಾರ; ವಂಚಕರ ಆಹಾರ ಹಿಂಸಾಚಾರ.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ಅಕ್ರಮವೆಂಬ ಹಗ್ಗಗಳಿಂದ ಅಪರಾಧ ಎಂಬ ತೇರನ್ನು ಎಳೆಯುವವರಿಗೆ ಧಿಕ್ಕಾರ !


ಕೆಟ್ಟದ್ದನ್ನು ಒಳ್ಳೆಯದೆಂದೂ ಒಳ್ಳೆಯದನ್ನು ಕೆಟ್ಟದ್ದೆಂದೂ ಬೋಧನೆ ಮಾಡುವವರಿಗೆ ಧಿಕ್ಕಾರ ! ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸುವಂಥವರಿಗೆ ಧಿಕ್ಕಾರ ! ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿಯೆಂದೂ ವಾದಿಸುವಂಥವರಿಗೆ ಧಿಕ್ಕಾರ !


ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು