Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:18 - ಕನ್ನಡ ಸತ್ಯವೇದವು C.L. Bible (BSI)

18 ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:18
25 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಆಗ ನಿನ್ನ ಬಾಳು ನಡುಹಗಲಿಗಿಂತ ಪ್ರಜ್ವಲ ಕತ್ತಲು ಕೂಡ ಪ್ರಾತಃಕಾಲದಂತೆ ಉಜ್ವಲ!


ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ನಿರ್ದೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ.


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


“ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು.


ಸಾಗುಸಾಗುತ್ತಾ ಬೆಳೆವುದಾ ಯಾತ್ರಿಕರ ಚೇತನ I ಪಡೆವರು ಸಿಯೋನ್ ಗಿರಿಯೊಳು ದೇವಾಧಿದೇವನ ದರ್ಶನ II


ನೇರವಾಗಿದೆ ಸಜ್ಜನನ ದಾರಿ ಸುಗಮವಾಗಿದೆ ನಿನ್ನಿಂದ ಆತನ ಹಾದಿ.


ದೇವರಲ್ಲಿ ಭಯಭಕ್ತಿಯುಳ್ಳ ರಾಜನು ನೀತಿಯಿಂದ ಪ್ರಜೆಗಳನಾಳುವಾತನು ಉದಯಕಾಲದ ಸೂರ್ಯನಿಗೆ ಸಮಾನನು ಏರುವನಾತ ಮೇಘರಹಿತ ಪ್ರಾತಃಕಾಲದೊಳು ತೇಜೋಮಯನಾಗಿ ಮೊಳೆಯಿಸುವನು ಪಚ್ಚೆಪಸಿರನು ಮಳೆ ತೋಯ್ದ ನೆಲದೊಳು ಹುಲುಸಾಗಿ.


ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ಆಗ ನೀತಿನ್ಯಾಯಗಳನ್ನು ನೀನರಿತುಕೊಳ್ಳುವೆ, ಸಕಲ ಸನ್ಮಾರ್ಗಸತ್ಯತೆಗಳನ್ನೂ ತಿಳಿದುಕೊಳ್ಳುವೆ.


ನೀನಾದರೊ ಸಜ್ಜನರ ಮಾರ್ಗದಲ್ಲಿ ನಡೆವೆ, ನೀತಿವಂತರ ಹಾದಿಯನ್ನು ಹಿಡಿವೆ.


ಸಜ್ಜನರ ಬೆಳಕು ಪ್ರಜ್ವಲಿಸುವುದು; ದುರ್ಜನರ ದೀಪವು ಆರಿಹೋಗುವುದು.


ವಿವೇಕಿಗಳ ಮಾರ್ಗ ಏರಿಸುವುದು ಸಜ್ಜೀವಕ್ಕೆ; ಅದನ್ನು ಕೈಗೊಳ್ಳುವವರು ಇಳಿಯರು ಪಾತಾಳಕ್ಕೆ.


ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು