Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:19 - ಕನ್ನಡ ಸತ್ಯವೇದವು C.L. Bible (BSI)

19 ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ದುಷ್ಟರ ಜೀವಿತವು ರಾತ್ರಿಯ ಕತ್ತಲೆಯಂತಿದೆ. ಅವರು ಕತ್ತಲೆಯಲ್ಲಿ ತಪ್ಪಿಸಿಕೊಂಡಿದ್ದು ತಮಗೆ ಕಾಣದ ವಸ್ತುಗಳ ಮೇಲೆ ಎಡವಿ ಬೀಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ, ದುಷ್ಟರ ಮಾರ್ಗವು ಕಗ್ಗತ್ತಲಿನಂತಿದೆ. ಅವರು ಯಾವುದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:19
16 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.


ಕತ್ತಲೊಳು ಜಾರಿಬೀಳುವ ಇಳುಮೇಡು ಅವರ ಮಾರ್ಗ ತಳ್ಳಲ್ಪಡುವರು, ಅಂಧಕಾರದೊಳು ಬಿದ್ದುಹೋಗುವರು ಕೇಡನ್ನು ಅವರ ಮೇಲೆ ಬರಮಾಡುವೆನು ವಿಚಾರಣೆ ವರುಷದ ಕೇಡನ್ನು ಬರಮಾಡುವೆನು ಸರ್ವೇಶ್ವರನ ನುಡಿ ಇದು.”


ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ಆದರೆ ರಾತ್ರಿಯಲ್ಲಿ ನಡೆಯುವವನು ಎಡವಿಬೀಳುತ್ತಾನೆ. ಕಾರಣ, ಅವನಲ್ಲಿ ಬೆಳಕು ಇಲ್ಲ,” ಎಂದರು.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.”


ಅಂಥವರು ಹಿಡಿವುದು ಕತ್ತಲು ಹಾದಿಯನ್ನು, ತೊರೆದುಬಿಡುವರು ಸತ್ಯದ ಮಾರ್ಗವನ್ನು.


ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.


ಅಂಥವರು ಕತ್ತಲೊಳು ತಡಕಾಡುವರು ಬೆಳಕಿಲ್ಲದೆ ತಡವರಿಸುವರು ಕುಡಿದು ಅಮಲೇರಿದವರಂತೆ.”


ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ.


ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.


ಬುದ್ಧಿಹೀನರು, ಮಂದಮತಿಗಳು, ಕತ್ತಲಲಿ ನಡೆವವರು ನೀವು I ಇದರಿಂದಲೆ ಕದಲುತ್ತಿರುವುವು ಧರೆಯ ಅಸ್ತಿವಾರಗಳು II


ವಕ್ರಬುದ್ಧಿಯುಳ್ಳವನ ಹಾದಿತುಂಬ ಮುಳ್ಳು, ಉರುಳು; ಅದರಿಂದ ದೂರವಿರುವನು ಪ್ರಾಣದಾಸೆಯುಳ್ಳವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು