Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:2 - ಕನ್ನಡ ಸತ್ಯವೇದವು C.L. Bible (BSI)

2 ನಾನು ನಿಮಗೆ ನೀಡುವುದು ಸದುಪದೇಶ; ನೀವು ಅದನ್ನು ಕೈಬಿಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನಿಮಗೆ ಸುಬೋಧೆಯನ್ನು ಮಾಡುವೆನು, ನನ್ನ ಉಪದೇಶವನ್ನು ಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ನಿಮಗೆ ಸುಬೋಧೆಯನ್ನು ಮಾಡುವೆನು, ನನ್ನ ಉಪದೇಶವನ್ನು ಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಉಪದೇಶಗಳು ಸದುಪದೇಶಗಳಾಗಿರುವುದರಿಂದ ಅವುಗಳನ್ನು ಎಂದಿಗೂ ಮರೆಯಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ನಾನು ನಿಮಗೆ ಸದುಪದೇಶವನ್ನು ಮಾಡುವೆನು, ನನ್ನ ಉಪದೇಶವನ್ನು ಬಿಟ್ಟುಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:2
15 ತಿಳಿವುಗಳ ಹೋಲಿಕೆ  

ಈ ವಿಷಯಗಳನ್ನೆಲ್ಲಾ ಇತರ ಸಹೋದರರಿಗೆ ನೀನು ವಿವರಿಸುವವನಾದರೆ, ನೀನು ಕ್ರಿಸ್ತಯೇಸುವಿನ ಯೋಗ್ಯ ದಾಸನಾಗುವೆ, ನೀನು ಅನುಸರಿಸುತ್ತಾ ಬಂದಿರುವ ಸದ್ಬೋಧನೆಯಿಂದಲೂ ವಿಶ್ವಾಸದಿಂದಲೂ ಆಧ್ಯಾತ್ಮಿಕ ಪೋಷಣೆಯನ್ನು ಪಡೆಯುವೆ.


ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.


ವಿಶ್ವಾಸಿಸಲು ಯೋಗ್ಯವಾದ ಹಾಗೂ ಕ್ರೈಸ್ತತತ್ವಗಳಿಗೆ ಅನುಗುಣವಾದ ಸಿದ್ಧಾಂತಗಳನ್ನು ಅವನು ಭದ್ರವಾಗಿ ಹಿಡಿದವನಾಗಿರಬೇಕು. ಆಗ ಸದ್ಬೋಧನೆಯಿಂದ ಇತರರನ್ನು ಪ್ರೋತ್ಸಾಹಿಸುವುದಕ್ಕೂ ಅದಕ್ಕೆ ವ್ಯತಿರಿಕ್ತವಾಗಿ ನಡೆಯುವವರ ತಪ್ಪುಗಳನ್ನು ಎತ್ತಿತೋರಿಸುವುದಕ್ಕೂ ಆತನು ಸಮರ್ಥನಾಗುತ್ತಾನೆ.


ನನ್ನ ನುಡಿ ವ್ಯಕ್ತಪಡಿಸುತ್ತದೆ ಹೃದಯದ ಯಥಾರ್ಥತೆಯನು ನನ್ನ ತುಟಿ ನುಡಿಯುತ್ತದೆ ಸತ್ಯವೆಂದು ಅರಿತವುಗಳನು.


ನೀನು ಹೇಳುವುದೇ ಸತ್ಯವೆಂದು ವಾದಿಸುತ್ತಿರುವೆ ದೇವರ ದೃಷ್ಟಿಯಲ್ಲಿ ನೀನು ಪರಿಶುದ್ಧನು ಎನ್ನುತ್ತಿರುವೆ.


ಆದರೆ ನೀವು ದ್ರೋಹಿಗಳಾಗಿ, ನನ್ನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈ ಮುಗಿಯುವುದಾದರೆ,


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಅಳಿಸಿಹಾಕಲು ನೋಡಿದರು ಇಳೆಯಿಂದೆನ್ನನು I ಆದರು ಉಳಿಸಿಕೊಂಡೆನು ನಿನ್ನ ನಿಯಮಗಳನು II


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲ ವಿಷಯದಲ್ಲೂ ಕೈಗೊಂಡು ಬರುತ್ತಿದ್ದೇವೆ. ನಾವಾಗಲಿ, ನಮ್ಮ ಮಡದಿ ಮಕ್ಕಳಾಗಲಿ, ಜೀವಮಾನದಲ್ಲೆಲ್ಲಾ ‘ದ್ರಾಕ್ಷಾರಸ ಕುಡಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು