Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:20 - ಕನ್ನಡ ಸತ್ಯವೇದವು C.L. Bible (BSI)

20 ಮಗನೇ, ನನ್ನ ಮಾತನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಕಂದಾ, ನನ್ನ ಮಾತುಗಳನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಕಂದಾ, ನನ್ನ ಮಾತುಗಳನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಮಗನೇ, ನನ್ನ ಮಾತುಗಳಿಗೆ ಗಮನಕೊಡು. ನನ್ನ ನುಡಿಗಳಿಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮಗನೇ, ನನ್ನ ಮಾತುಗಳಿಗೆ ಗಮನಕೊಡು; ನನ್ನ ನುಡಿಗಳಿಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:20
10 ತಿಳಿವುಗಳ ಹೋಲಿಕೆ  

ಮಗನೇ, ನನ್ನ ಜ್ಞಾನೋಪದೇಶವನ್ನು ಆಲಿಸು; ವಿವೇಕದಿಂದ ಕೂಡಿ ನನ್ನ ಬೋಧೆಗೆ ಕಿವಿಗೊಡು.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಮಗನೇ, ನನ್ನ ಮಾತುಗಳನ್ನು ಅನುಸರಿಸು, ನನ್ನ ಆಜ್ಞೆಗಳನ್ನು ಮನಸ್ಸಿನಲ್ಲಿ ಇಡು.


ನನ್ನ ಜನರೇ, ಕಿವಿಗೊಡಿ ನನ್ನ ಬೋಧನೆಗೆ I ಗಮನಕೊಡಿ ನಾ ಹೇಳುವ ಮಾತುಗಳಿಗೆ II


ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು I ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು II


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಜ್ಞಾನದ ಕಡೆಗೆ ಕಿವಿಗೊಡು, ವಿವೇಕದ ಕಡೆಗೆ ಮನತಿರುಗಿಸು.


ಎಲೆ ಮಾನವ, ಬಲುದಿನ ಬಾಳಲು ಬಯಸುವೆಯಾ? I ಆಯುರಾರೋಗ್ಯ ಭಾಗ್ಯವನು ಆಶಿಸುವೆಯಾ? II


ಆ ನುಡಿಗಳನ್ನು ನಿನ್ನ ಅಂತರಂಗದಲ್ಲಿ ಕಾದಿಡು; ಅವು ನಿನ್ನ ತುಟಿಯ ಮೇಲೆ ಸಿದ್ಧವಿದ್ದರೆ ಒಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು