Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:23 - ಕನ್ನಡ ಸತ್ಯವೇದವು C.L. Bible (BSI)

23 ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ; ಅದರೊಳಗಿಂದ ಜೀವಧಾರೆಗಳು ಹೊರಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿನ್ನ ಆಲೋಚನೆಗಳ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಿನ್ನ ನಡತೆಯು ನಿನ್ನ ಆಲೋಚನೆಗಳ ಮೇಲೆ ಆಧಾರಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:23
21 ತಿಳಿವುಗಳ ಹೋಲಿಕೆ  

ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ.


ಬಾಯಿಯನ್ನು ಕಾಯುವವನು ಜೀವವನ್ನು ಕಾಯುವನು; ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


ಮಗನೇ ಕೇಳು, ಬುದ್ಧಿವಂತನಾಗಿರು, ನಿನ್ನ ಮನಸ್ಸನ್ನು ಸನ್ಮಾರ್ಗದತ್ತ ಹರಿಸು.


ತನ್ನ ಶಕ್ತಿಯಲ್ಲೆ ಭರವಸೆ ಇಡುವವನು ಮೂಢನು; ಜ್ಞಾನಿಗಳ ಮಾರ್ಗದಲ್ಲಿ ನಡೆವವನು ವಿಮುಕ್ತನಾಗುವನು.


ಪ್ರಲೋಭನೆಗೆ ಒಳಗಾಗದಂತೆ ಎಚ್ಚರದಿಂದ ಇದ್ದು ಪ್ರಾರ್ಥನೆಮಾಡಿ, ಆತ್ಮಕ್ಕೇನೋ ಆಸಕ್ತಿ ಇದೆ; ಆದರೆ ದೇಹಕ್ಕೆ ಶಕ್ತಿ ಸಾಲದು,” ಎಂದರು.


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ಜ್ಞಾನ ಪಡೆಯಬೇಕೆಂಬುದೇ ಜ್ಞಾನಬೋಧೆಯ ಮೂಲಾಂಶ; ನಿನ್ನ ಸರ್ವಸಂಪತ್ತಿನಿಂದ ವಿವೇಕವನ್ನು ಗಳಿಸಿಕೊ.


ಮಗನೇ, ಸುಜ್ಞಾನ, ಸದ್ಬುದ್ಧಿಗಳು ನಿನ್ನಲ್ಲಿ ಸ್ಥಿರವಾಗಿರಲಿ; ನಿನ್ನ ಕಣ್ಣುಗಳಿಂದ ಅವು ಮರೆಯಾಗದಿರಲಿ.


ವಕ್ರಬುದ್ಧಿಯುಳ್ಳವನ ಹಾದಿತುಂಬ ಮುಳ್ಳು, ಉರುಳು; ಅದರಿಂದ ದೂರವಿರುವನು ಪ್ರಾಣದಾಸೆಯುಳ್ಳವನು.


ಸದ್ಗುಣಸ್ತ್ರೀ ಕಾಪಾಡಿಕೊಳ್ಳುತ್ತಾಳೆ ಸನ್ಮಾನವನ್ನು; ಬಲವಂತವ್ಯಕ್ತಿ ಕಾಪಾಡಿಕೊಳ್ಳುತ್ತಾನೆ ಆಸ್ತಿಪಾಸ್ತಿಯನ್ನು.


ಲೋಕದಲ್ಲಿ ನಾನು ಮತ್ತೊಂದು ಕೇಡನ್ನು ಕಂಡೆ. ಅದೇನೆಂದರೆ, ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲೇ ಕೊರಗುತ್ತಿರುತ್ತಾನೆ.


ಆದರೆ ಬಾಯಿಂದ ಹೊರಡುವಂಥವು ಅವನ ಹೃದಯದಿಂದ ಹೊರಹೊಮ್ಮುತ್ತವೆ; ಇವು ಮನುಷ್ಯನನ್ನು ಕಲುಷಿತಗೊಳಿಸುತ್ತವೆ.


ಆದರೆ ಅವನು ಇಸ್ರಯೇಲ್ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.


ಸಜ್ಜನರ ರಾಜಮಾರ್ಗ ಹಾನಿಗೆ ದೂರ; ಸನ್ನಡತೆಯುಳ್ಳವ ಪ್ರಾಣಸಂರಕ್ಷಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು