Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:24 - ಕನ್ನಡ ಸತ್ಯವೇದವು C.L. Bible (BSI)

24 ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸು, ಕೆಟ್ಟನುಡಿಗಳನ್ನು ಬಾಯಿಂದ ದೂರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ಕೆಟ್ಟ ನುಡಿಗಳನ್ನು ಬಾಯಿಂದ ದೂರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸೊಟ್ಟ ಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ತುಟಿಗಳ ವಕ್ರತೆಯನ್ನು ದೂರಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸತ್ಯವನ್ನು ಸೊಟ್ಟಗೆ ಮಾಡದಿರು; ಸುಳ್ಳನ್ನು ಹೇಳದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ವಕ್ರಮಾತುಗಳನ್ನು ನಿನ್ನ ಬಾಯಿಂದ ತೊಲಗಿಸಿ; ಕೆಟ್ಟ ಮಾತುಗಳು ನಿನ್ನ ತುಟಿಗಳಿಂದ ದೂರವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:24
16 ತಿಳಿವುಗಳ ಹೋಲಿಕೆ  

ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ.


ನನ್ನ ಮಾತುಗಳೆಲ್ಲ ನೀತಿಭರಿತ ಅವುಗಳಲ್ಲಿ ಇಲ್ಲ ಕುಟಿಲ, ಕುತಂತ್ರ.


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.


ದುರುಳನೂ ನೀಚನೂ ಆದವನ ನಡತೆಯನ್ನು ನೋಡು: ಅವನ ಬಾಯಿಂದ ಹೊರಡುವುದು ಕುಟಿಲ ಮಾತು.


ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.


ಈಗಲಾದರೋ ಕೋಪ, ರೋಷ, ಮತ್ಸರ - ಇವುಗಳನ್ನು ತ್ಯಜಿಸಿರಿ; ದೂಷಣೆ ಮತ್ತು ಹೊಲಸು ಮಾತುಗಳು ನಿಮ್ಮ ಬಾಯಿಂದ ಬರಕೂಡದು.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?


ವಕ್ರಮನಸ್ಸುಳ್ಳವನು ಒಳಿತನ್ನು ಕಾಣನು; ಕೆಟ್ಟ ನಾಲಿಗೆಯವನು ಸಂಕಟಕ್ಕೆ ಸಿಕ್ಕಿಕೊಳ್ಳುವನು.


ನಿನ್ನ ಕೈಯಿಂದ ದೂರವಿರಲಿ ಅಕ್ರಮ ನಿನ್ನ ಗುಡಾರದಲಿ ನೆಲಸದಿರಲಿ ಅನ್ಯಾಯ.


ನಿನ್ನ ಕಣ್ಣುಗಳು ನೇರವಾಗಿ ನಾಟಿರಲಿ, ಕಣ್ಣು ರೆಪ್ಪೆಗಳು ಮುಂದಾಗಿ ತೆರೆದಿರಲಿ.


ಸಜ್ಜನರ ಬಾಯಲ್ಲಿ ಹಿತವಚನ; ದುರ್ಜನರ ಬಾಯಲ್ಲಿ ನೀಚವಚನ.


ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು.


ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು