Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:25 - ಕನ್ನಡ ಸತ್ಯವೇದವು C.L. Bible (BSI)

25 ನಿನ್ನ ಕಣ್ಣುಗಳು ನೇರವಾಗಿ ನಾಟಿರಲಿ, ಕಣ್ಣು ರೆಪ್ಪೆಗಳು ಮುಂದಾಗಿ ತೆರೆದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೆಟ್ಟಗೆ ದೃಷ್ಟಿಸು, ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೆಟ್ಟಗೆ ದೃಷ್ಟಿಸು; ನಿನ್ನ ಕಣ್ಣುಗಳು ನಿನ್ನ ಮುಂದೆಯೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಒಳ್ಳೆಯದನ್ನೇ ದೃಷ್ಟಿಸು; ನಿನ್ನ ನೋಟವನ್ನು ನಿನ್ನ ಗುರಿಯ ಮೇಲೆ ಕೇಂದ್ರೀಕರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಿನ್ನ ದೃಷ್ಟಿ ನೇರವಾಗಿಯೇ ನೋಡಲಿ; ನಿನ್ನ ನೋಟವು ನೇರವಾಗಿ ನಿನ್ನ ಮುಂದೆಯೇ ನಾಟಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:25
9 ತಿಳಿವುಗಳ ಹೋಲಿಕೆ  

ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ I ಚೇತನ ನೀಡು ನಿನ್ನ ಮಾರ್ಗದಲಿ ನನಗೆ II


“ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ ನಿನ್ನ ದೇಹವೆಲ್ಲ ಕತ್ತಲೆಮಯವಾಗುವುದು.


“ಕನ್ಯೆಯನು (ಕಾಮದೃಷ್ಟಿಯಿಂದ) ನೋಡೆನೆಂದು ಮಾಡಿಕೊಂಡಿರುವೆ ನನ್ನ ಕಣ್ಣುಗಳೊಡನೆ ಒಪ್ಪಂದವನು.


ನಿನ್ನಾ ಕಣ್ಣು ಇಲ್ಲದ್ದನ್ನೇ ಕಾಣುವುದು; ಮನಸ್ಸು ವಕ್ರವಾದುವುಗಳನ್ನೇ ಹೊರಪಡಿಸುವುದು.


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸು, ಕೆಟ್ಟನುಡಿಗಳನ್ನು ಬಾಯಿಂದ ದೂರಮಾಡು.


ನೀ ನಡೆವ ದಾರಿ ಸಮನಾಗಿರಲಿ, ನೀ ಕೈಗೊಳ್ಳುವ ಹಾದಿ ದೃಢವಾಗಿರಲಿ.


ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುತ್ತಾನೆ; ಬುದ್ಧಿವಂತನು ಸನ್ಮಾರ್ಗದಲ್ಲಿ ಮುಂದುವರಿಯುತ್ತಾನೆ.


ದುಷ್ಟನ ಮುಖದಲ್ಲಿ ಹಟಭಾವನೆ; ಸಜ್ಜನನ ನಡತೆಯಲ್ಲಿ ಸದೃಢತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು