Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:26 - ಕನ್ನಡ ಸತ್ಯವೇದವು C.L. Bible (BSI)

26 ನೀ ನಡೆವ ದಾರಿ ಸಮನಾಗಿರಲಿ, ನೀ ಕೈಗೊಳ್ಳುವ ಹಾದಿ ದೃಢವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೀನು ನಡೆಯುವ ದಾರಿಯನ್ನು ಸಮಮಾಡು; ನಿನ್ನ ಮಾರ್ಗಗಳೆಲ್ಲಾ ದೃಢವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿನ್ನ ಕಾರ್ಯಗಳನ್ನು ಎಚ್ಚರಿಕೆಯಿಂದ ಮಾಡು; ಆಗ ನಿನ್ನ ಜೀವನವು ದೃಢವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೀನು ನಡೆಯುವ ದಾರಿಯ ಬಗ್ಗೆ ಗಮನವಿರಲಿ; ನೀನು ಕೈಗೊಳ್ಳುವ ಹಾದಿ ಸ್ಥಿರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:26
19 ತಿಳಿವುಗಳ ಹೋಲಿಕೆ  

ನೀವು ಹಿಡಿದಿರುವ ಹಾದಿಯನ್ನು ಸರಿಪಡಿಸಿಕೊಳ್ಳಿ. ಆಗ ಕುಂಟುವ ಕಾಲು ಉಳುಕದೆ ವಾಸಿಯಾಗುತ್ತದೆ.


ಪ್ರಭುವಿಗೆ ಪ್ರಿಯವು ಮಾನವನ ಪ್ರವರ್ತನ I ಅವನ ನಡತೆಗೆ ಆತನೆ ಮಾರ್ಗದರ್ಶನ II


ನಿನ್ನ ನಿಬಂಧನೆಗಳ ಪಾಲನೆಯಲಿ I ಸ್ಥಿರತೆ ಇದ್ದರೆ ಒಳಿತು ನನ್ನ ಮನದಲಿ II


ಪ್ರಭು ವಿಶ್ವಾಸಕ್ಕೆ ಪಾತ್ರರು. ಅವರು ನಿಮ್ಮನ್ನು ಸದೃಢರನ್ನಾಗಿ ಮಾಡಿ ಕೇಡಿನಿಂದ ನಿಮ್ಮನ್ನು ಕಾಪಾಡುವರು.


ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಿಮಗೆ ಒದಗಿರುವ ಪರಿಸ್ಥಿತಿಯನ್ನು ಕುರಿತು ಆಲೋಚಿಸಿ ನೋಡಿ.


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


ಬುದ್ಧಿಹೀನರಾಗಿರದೆ ಪ್ರಭುವಿನ ಚಿತ್ತವೇನೆಂದು ಗ್ರಹಿಸಿಕೊಳ್ಳಿರಿ.


ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯನು, ಖಂಡಿತ ಜೀವಿಸುವನು.


ನನ್ನಯ ನಡತೆಯನು ಪರಿಶೋಧಿಸುತ್ತ I ತಿರುಗಿಕೊಂಡೆನು ನಿನ್ನ ಕಟ್ಟಳೆಯತ್ತ II


ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.


ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ.


ಜೀವಮಾರ್ಗದ ವಿವೇಚನೆ ಅವಳಿಗಿಲ್ಲ. ಅದರ ಅರಿವೂ ಅವಳಿಗಿರುವುದಿಲ್ಲ. ಅವಳ ನಡತೆಯು ಅಷ್ಟು ಚಂಚಲ.


ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ I ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ II


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ನಿನ್ನ ಕಣ್ಣುಗಳು ನೇರವಾಗಿ ನಾಟಿರಲಿ, ಕಣ್ಣು ರೆಪ್ಪೆಗಳು ಮುಂದಾಗಿ ತೆರೆದಿರಲಿ.


ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುತ್ತಾನೆ; ಬುದ್ಧಿವಂತನು ಸನ್ಮಾರ್ಗದಲ್ಲಿ ಮುಂದುವರಿಯುತ್ತಾನೆ.


ದುಷ್ಟನ ಮುಖದಲ್ಲಿ ಹಟಭಾವನೆ; ಸಜ್ಜನನ ನಡತೆಯಲ್ಲಿ ಸದೃಢತೆ.


ಮಗನೇ ಕೇಳು, ಬುದ್ಧಿವಂತನಾಗಿರು, ನಿನ್ನ ಮನಸ್ಸನ್ನು ಸನ್ಮಾರ್ಗದತ್ತ ಹರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು