Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:4 - ಕನ್ನಡ ಸತ್ಯವೇದವು C.L. Bible (BSI)

4 ತಂದೆ ನನಗೆ ಹೀಗೆಂದು ಬೋಧನೆ ಮಾಡಿದ: “ನನ್ನ ಮಾತುಗಳು ಭದ್ರವಾಗಿರಲಿ ನಿನ್ನ ಮನದಲ್ಲಿ; ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು ಸುಖದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತಂದೆಯು ನನಗೆ ಬೋಧಕನಾಗಿ ಹೀಗೆಂದನು - ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ತಂದೆ ನನಗೆ ಉಪದೇಶ ಮಾಡಿದ್ದೇನೆಂದರೆ: “ನನ್ನ ಮಾತುಗಳನ್ನು ನೆನಪುಮಾಡಿಕೊ; ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಬದುಕುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ತಂದೆ ನನಗೆ ಬೋಧಿಸಿ ಹೇಳಿದ್ದೇನೆಂದರೆ, “ನನ್ನ ಮಾತುಗಳನ್ನು ಮನಃಪೂರ್ವಕವಾಗಿ ಪಾಲಿಸು; ನನ್ನ ಆಜ್ಞೆಗಳನ್ನು ಕೈಗೊಳ್ಳು, ಆಗ ನೀನು ಬಾಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:4
22 ತಿಳಿವುಗಳ ಹೋಲಿಕೆ  

ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ಅವರ ಆಜ್ಞೆಯೇ ನಿತ್ಯಜೀವದಾಯಕ ಎಂದು ನಾನು ಬಲ್ಲೆ. ಆದ್ದರಿಂದಲೇ ಪಿತನು ಹೇಳಿದಂತೆಯೇ ನಾನು ಮಾತನಾಡುತ್ತೇನೆ.”


ಕನೀನಿಕೆಯಂತೆ ನನ್ನ ಕಟ್ಟಳೆಯನ್ನು ಪಾಲಿಸು, ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ತಂದೆತಾಯಿಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಕೆರಳಿಸಬೇಡಿ. ಪ್ರತಿಯಾಗಿ ಪ್ರಭುವಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಅವರಿಗೆ ಶಿಕ್ಷಣವನ್ನು ಕೊಟ್ಟು ಶಿಸ್ತಿನಿಂದ ಸಾಕಿಸಲಹಿರಿ.


ಈ ದಿನ ನಾನು ನಿನಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿ ನಾಟಿರಲಿ.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.


ಬಾಲ್ಯದಲ್ಲೇ ಮಕ್ಕಳನ್ನು ಸರಿದಾರಿಯಲ್ಲಿ ಪಳಗಿಸು; ಮುಪ್ಪಿನಲ್ಲೂ ಅವರು ಆ ಪದ್ಧತಿ ಮೀರಿ ನಡೆಯದಿರಲಿ.


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಅನುಸರಿಸಿದೆ ನಿನ್ನ ನೇಮನಿಯಮಗಳನೆಲ್ಲ I ನಿನಗೆ ಬಟ್ಟಬಯಲು ನನ್ನ ನಡತೆಯೆಲ್ಲ II


ಮಗನೇ, ನಾನು ಹೇಳುವುದು ನಾಟಲಿ ನಿನ್ನ ಮನಸ್ಸಿಗೆ; ನನ್ನ ನಡತೆ ಆದರ್ಶಕವಾಗಿರಲಿ ನಿನ್ನ ಕಣ್ಣುಗಳಿಗೆ.


“ಹೌದು, ನಾನೇ,” ಎಂದನು. ಆಗ ಮಾನೋಹನು, “ನೀವು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗಾಗಿ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು?” ಎಂದು ಕೇಳಿದನು.


ನೀತಿಯುತ ಹಾಗೂ ಶಾಶ್ವತ ನಿನ್ನಾ ಶಾಸನ I ನಾ ಜೀವಿಸುವಂತೆ ದಯಪಾಲಿಸೆನಗೆ ಸುಜ್ಞಾನ II


ಅವು ನಿನ್ನ ದಿನಗಳನ್ನು ಹೆಚ್ಚಿಸುತ್ತವೆ; ನಿನಗೆ ದೀರ್ಘಾಯುಸ್ಸನ್ನು ತರುತ್ತವೆ, ನಿನಗೆ ಸುಕ್ಷೇಮವನ್ನು ಉಂಟುಮಾಡುತ್ತವೆ.


ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು