Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:7 - ಕನ್ನಡ ಸತ್ಯವೇದವು C.L. Bible (BSI)

7 ಜ್ಞಾನ ಪಡೆಯಬೇಕೆಂಬುದೇ ಜ್ಞಾನಬೋಧೆಯ ಮೂಲಾಂಶ; ನಿನ್ನ ಸರ್ವಸಂಪತ್ತಿನಿಂದ ವಿವೇಕವನ್ನು ಗಳಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ, ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜ್ಞಾನವನ್ನು ಪಡೆಯಬೇಕೆಂಬದೇ ಜ್ಞಾನಬೋಧೆಯ ಪ್ರಥಮಪಾಠ; ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಜ್ಞಾನವನ್ನು ಪಡೆಯಲು ನೀನು ನಿರ್ಧರಿಸಿದಾಗಲೇ ಜ್ಞಾನವು ನಿನ್ನಲ್ಲಿ ಆರಂಭವಾಗುತ್ತದೆ. ಆದ್ದರಿಂದ ವಿವೇಕವನ್ನು ಪಡೆಯಲು ನಿನಗಿರುವದನ್ನೆಲ್ಲಾ ಉಪಯೋಗಿಸು. ಆಗ ನೀನು ವಿವೇಕಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಜ್ಞಾನವೇ ಮುಖ್ಯವಾದದ್ದು, ಆದ್ದರಿಂದ ಜ್ಞಾನವನ್ನು ಸಂಪಾದಿಸು; ನಿನ್ನಲ್ಲಿರುವ ಎಲ್ಲಾ ಸಂಪತ್ತನ್ನು ವ್ಯಯಮಾಡಿದರೂ ತಿಳುವಳಿಕೆಯನ್ನು ಪಡೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:7
18 ತಿಳಿವುಗಳ ಹೋಲಿಕೆ  

ಧನವು ಹೇಗೋ ಹಾಗೆ ಜ್ಞಾನವೂ ಆಶ್ರಯ; ಜ್ಞಾನದ ವೈಶಿಷ್ಟ್ಯವೆಂದರೆ ಅದು ಜ್ಞಾನಿಗೆ ಜೀವದಾಯಕ.


ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!


ಬಂಗಾರಕ್ಕಿಂತ ಜ್ಞಾನಾರ್ಜನೆ ಎಷ್ಟೋ ಮೇಲು; ಬೆಳ್ಳಿಗಿಂತ ವಿವೇಕಾರ್ಜನೆ ಎಷ್ಟೋ ಲೇಸು.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ವಿವೇಕಿಯಾದೆನು ನಿನ್ನ ನಿಯಮಗಳ ಮೂಲಕ I ದ್ವೇಷಿಸುತಿಹೆನು ಪ್ರತಿಯೊಂದು ಮಿಥ್ಯಾ ಮಾರ್ಗ II


ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.


ಹಬೆಯಂತೆ ನಾಪತ್ತೆ ಸುಳ್ಳಿನಿಂದ ಸಿಕ್ಕಿದ ಸಂಪತ್ತು; ಮೃತ್ಯುಪಾಶದಂತೆ ಅದೊಂದು ವಿಪತ್ತು.


“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ಮರೆಯಬೇಡ, ನನ್ನ ಮಾತಿಗೆ ಓರೆಯಾಗಬೇಡ, ಜ್ಞಾನವನ್ನು ಪಡೆ. ವಿವೇಕವನ್ನು ಗಳಿಸಿಕೊ.


ನಾನು ಸ್ಥಾಪಿಸಲ್ಪಟ್ಟೆ ಪ್ರಾರಂಭದಲ್ಲೆ ಜಗದುತ್ಪತ್ತಿಗೆ ಮುಂಚೆಯೇ, ಅನಾದಿಕಾಲದಲ್ಲೆ.


ನಿಮ್ಮ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವುದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಇವರನ್ನು ಪರಿಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳನ್ನು ನನಗೆ ಅನುಗ್ರಹಿಸಿರಿ,” ಎಂದು ದೇವರನ್ನು ಬೇಡಿಕೊಂಡನು.


ಹಣದಂತೆ ಅದನ್ನು ಹುಡುಕು, ನಿಧಿಯಂತೆ ಅದನ್ನು ತಡಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು