Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:10 - ಕನ್ನಡ ಸತ್ಯವೇದವು C.L. Bible (BSI)

10 ನಿನ್ನ ಸಿರಿಸಂಪತ್ತು ಪರರ ಮನೆ ತುಂಬೀತು, ನಿನ್ನ ದುಡಿಮೆಯ ಫಲ ಅನ್ಯನ ಮನೆ ಸೇರೀತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು, ನೀನು ಅನ್ಯನ ಮನೆಯಲ್ಲಿ ದುಡಿಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನಗೆ ಗೊತ್ತಿಲ್ಲದವರು ನಿನ್ನ ಐಶ್ವರ್ಯವನ್ನೆಲ್ಲಾ ತೆಗೆದುಕೊಳ್ಳುವರು; ನೀನು ದುಡಿದು ಸಂಪಾದಿಸಿದ್ದನ್ನು ಬೇರೆಯವರು ಪಡೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆ ಎಚ್ಚರಿಕೆ, ನಿನ್ನ ಪ್ರಯಾಸದ ಫಲವು ಪರರ ಮನೆ ಸೇರದಂತೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:10
8 ತಿಳಿವುಗಳ ಹೋಲಿಕೆ  

ಅನ್ಯಜನರು ಅದರ ಶಕ್ತಿಯನ್ನು ಹೀರಿಕೊಂಡರೂ ಅದಕ್ಕೆ ಅರಿವಿಲ್ಲ. ಅದರ ತಲೆಗೂದಲು ನೆರೆತುಹೋದರೂ ಅದಕ್ಕೆ ಪ್ರಜ್ಞೆ ಇಲ್ಲ.


ನಿನ್ನ ಪೌರುಷತ್ವವನ್ನೆಲ್ಲಾ ಸ್ತ್ರೀಯರಿಗೆ ಒಪ್ಪಿಸದಿರು; ಅರಸನನ್ನೆ ನಾಶಮಾಡಬಲ್ಲ ಅವರಿಗಾಗಿ ಹಣವನ್ನೆಲ್ಲ ವ್ಯಯಮಾಡದಿರು.


ಯಾವ ಪ್ರಾಯಶ್ಚಿತ್ತಕ್ಕೂ ಅವನು ಒಪ್ಪನು; ಎಷ್ಟು ಲಂಚಕೊಟ್ಟರೂ ಒಲಿಯನು, ಮಣಿಯನು.


ಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದ ಈ ನಿಮ್ಮ ಮಗ ಬಂದದ್ದೇ ಕೊಬ್ಬಿಸಿದ ಪ್ರಾಣಿಯನ್ನು ಕೊಯ್ಯಿಸಿದ್ದೀರಿ!’ ಎಂದು ವಾದಿಸಿದ.


ನಿನ್ನ ಪುರುಷತ್ವ ಪರಾಧೀನವಾದೀತು, ಎಚ್ಚರಿಕೆ! ನಿನ್ನ ಆಯುಷ್ಯ ಕ್ರೂರಿಗಳ ವಶವಾದೀತು, ಜೋಕೆ!


ಕಟ್ಟಕಡೆಗೆ ನಿನ್ನ ದೇಹವೆಲ್ಲ ಕರಗಿಹೋದೀತು; ಅಂಗಲಾಚಿ ನೀ ಕೊರಗಬೇಕಾದೀತು ಇಂತೆಂದು:


ವೇಶ್ಯೆಯನ್ನು ಕೊಂಡುಕೊಳ್ಳಬಹುದು ತುಂಡುರೊಟ್ಟಿಗೆ, ವ್ಯಭಿಚಾರಿಣಿಯೇ ಬೇಟೆಮಾಡುವಳು ನಿನ್ನ ಸಿರಿಪ್ರಾಣಕ್ಕೆ!


ಜ್ಞಾನಪ್ರಿಯ ಮಗನಿಂದ ತಂದೆಗೆ ಸಂತೋಷ; ವೇಶ್ಯೆಯರ ಸಂಗದಿಂದ ಆಸ್ತಿ ವಿನಾಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು