Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:11 - ಕನ್ನಡ ಸತ್ಯವೇದವು C.L. Bible (BSI)

11 ಕಟ್ಟಕಡೆಗೆ ನಿನ್ನ ದೇಹವೆಲ್ಲ ಕರಗಿಹೋದೀತು; ಅಂಗಲಾಚಿ ನೀ ಕೊರಗಬೇಕಾದೀತು ಇಂತೆಂದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕೊನೆಯಲ್ಲಿ, ನಿನ್ನ ಆರೋಗ್ಯವೆಲ್ಲಾ ಕೆಟ್ಟುಹೋಗಿ ನಿನ್ನಲ್ಲಿರುವುದನ್ನೆಲ್ಲಾ ಕಳೆದುಕೊಂಡು ನೀನು ಗೋಳಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಿನ್ನ ಜೀವನದ ಅಂತ್ಯದಲ್ಲಿ ನಿನ್ನ ದೇಹವೂ ಕ್ಷೀಣಿಸಿದಾಗ, ನೀನು ನರಳಬೇಕಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:11
12 ತಿಳಿವುಗಳ ಹೋಲಿಕೆ  

ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ಅವಳು ದೋಷಿಯಾಗಿ ಗಂಡನಿಗೆ ದ್ರೋಹವೆಸಗಿದ್ದರೆ ಕುಡಿದ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವುದು. ಈ ಕಾರಣ ಅವಳ ಹೊಟ್ಟೆ ಉಬ್ಬುವುದು. ಅವಳ ಜನನೇಂದ್ರಿಯಗಳು ಬತ್ತಿಹೋಗುವುವು. ಆಕೆ ತನ್ನ ಜನರ ಮಧ್ಯೆ ಶಾಪಗ್ರಸ್ತಳಾಗುವಳು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಉರುಳಿನತ್ತ ಹಾರುವ ಹಕ್ಕಿಯಂತೆ, ಕರುಳನ್ನು ತಿವಿಯುವ ಬಾಣದಂತೆ, ತನ್ನ ಪ್ರಾಣಕ್ಕಿರುವ ಅಪಾಯವನ್ನು ತಿಳಿಯದೆ, ಅವಳನ್ನು ತಡಮಾಡದೆ ಹಿಂಬಾಲಿಸುತ್ತಾನೆ ಆತ.


ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.


ನಿನ್ನ ಸಿರಿಸಂಪತ್ತು ಪರರ ಮನೆ ತುಂಬೀತು, ನಿನ್ನ ದುಡಿಮೆಯ ಫಲ ಅನ್ಯನ ಮನೆ ಸೇರೀತು!


“ಅಕಟಕಟಾ ಶಿಸ್ತನ್ನೇ ನಾನು ದ್ವೇಷಿಸಿದೆನಲ್ಲಾ! ನನಗೆ ಕೊಡಲಾದ ತಿದ್ದುಪಾಟನ್ನು ತಾತ್ಸಾರಮಾಡಿದೆನಲ್ಲಾ!


ಅವಳ ಬಳಿಗೆ ಹೋಗುವವರು ಹಿಂದಿರುಗುವುದಿಲ್ಲ, ಅವರಿಗೆ ಜೀವಮಾರ್ಗ ಪುನಃ ದೊರಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು