Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:12 - ಕನ್ನಡ ಸತ್ಯವೇದವು C.L. Bible (BSI)

12 “ಅಕಟಕಟಾ ಶಿಸ್ತನ್ನೇ ನಾನು ದ್ವೇಷಿಸಿದೆನಲ್ಲಾ! ನನಗೆ ಕೊಡಲಾದ ತಿದ್ದುಪಾಟನ್ನು ತಾತ್ಸಾರಮಾಡಿದೆನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12-13 ಆಗ ನೀನು, “ನಾನೇಕೆ ನನ್ನ ತಂದೆತಾಯಿಗಳ ಮಾತನ್ನು ಕೇಳಲಿಲ್ಲ? ನಾನೇಕೆ ನನ್ನ ಉಪದೇಶಕರ ಮಾತಿಗೆ ಕಿವಿಗೊಡಲಿಲ್ಲ? ನಾನು ಅವರ ಸದುಪದೇಶವನ್ನು ದ್ವೇಷಿಸಿದ್ದರಿಂದಲೂ ಅವರ ಬುದ್ಧಿಮಾತನ್ನು ತಳ್ಳಿಬಿಟ್ಟಿದ್ದರಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ನೀನು, “ಶಿಸ್ತನ್ನು ನಾನು ಎಷ್ಟೋ ಹಗೆ ಮಾಡಿದೆ; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:12
23 ತಿಳಿವುಗಳ ಹೋಲಿಕೆ  

ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.


ಮೂರ್ಖನು ತಂದೆಯ ಶಿಕ್ಷಣವನ್ನು ನಿರ್ಲಕ್ಷ್ಯ ಮಾಡುತ್ತಾನೆ; ಜಾಣನು ಆತನ ಗದರಿಕೆಯನ್ನೂ ಗಮನಿಸುತ್ತಾನೆ.


ನನ್ನ ಬುದ್ಧಿವಾದವನ್ನು ಅಲಕ್ಷ್ಯಮಾಡಿದಿರಿ, ನನ್ನ ತಿದ್ದುಪಾಟನ್ನು ತಳ್ಳಿಬಿಟ್ಟಿರಿ.


“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.


ಶಿಕ್ಷೆಯನ್ನು ಉಪೇಕ್ಷಿಸುವವನಿಗೆ ಕಾದಿದೆ ಬಡತನ ಹಾಗು ಅವಮಾನ; ಗದರಿಕೆಯನ್ನು ಗಮನಿಸುವವ ಹೊಂದುವನು ಸನ್ಮಾನ.


ನನ್ನ ಮಾತುಗಳನು ನೀವು ತಾತ್ಸಾರ ಮಾಡುತ್ತೀರಿ I ನನ್ನ ತಿದ್ದುಪಾಟುಗಳನು ನೀವು ಧಿಕ್ಕರಿಸುತ್ತೀರಿ II


ನಾ ಮಂದಮತಿಯಾಗಿದ್ದೆ ಅರಿವಿಲ್ಲದೆ I ನಾ ವನ್ಯಮೃಗನಂತಿದ್ದೆ ನಿನ್ನ ಮುಂದೆ II


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಅವರಾದರೋ, “ಬಿಡು ದಾರಿ, ಪ್ರವಾಸಿಯಾಗಿ ಬಂದ ಇವನು ನಮಗೆ ನ್ಯಾಯಹೇಳುವವನಾಗಿಬಿಟ್ಟ! ದಾರಿ ಬಿಡದಿದ್ದರೆ ಆ ಮನುಷ್ಯರಿಗಿಂತ ನಿನಗೇ ಹೆಚ್ಚು ಕೇಡಾದೀತು,” ಎಂದು ಹೇಳಿ ಲೋಟನ ಮೇಲೆ ಬಿದ್ದು ತುಳಿದು ಬಾಗಿಲನ್ನು ಒಡೆದುಹಾಕುವುದರಲ್ಲಿದ್ದರು.


ಏಕೆಂದರೆ ಆಜ್ಞೆಯೇ ಜ್ಯೋತಿ, ಬೋಧನೆಯೇ ಬೆಳಕು, ಶಿಸ್ತಿನಿಂದ ಕೂಡಿದ ಶಿಕ್ಷಣವೇ ಜೀವನಕ್ಕೆ ಮಾರ್ಗ.


ಕಟ್ಟಕಡೆಗೆ ನಿನ್ನ ದೇಹವೆಲ್ಲ ಕರಗಿಹೋದೀತು; ಅಂಗಲಾಚಿ ನೀ ಕೊರಗಬೇಕಾದೀತು ಇಂತೆಂದು:


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


ಶಿಸ್ತನ್ನು ಕೈಗೊಳ್ಳುವವನು ಜೀವಮಾರ್ಗದಲ್ಲಿರುವನು; ತಿದ್ದುಪಾಟನ್ನು ತಿರಸ್ಕರಿಸುವವನು ದಾರಿ ತಪ್ಪುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು