Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ನೀನು ವಿವೇಕಶೀಲನಾಗುವೆ; ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಯ್ದುಕೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೀಗಾದರೆ ನೀನು ವಿವೇಚನೆಯನ್ನು ಹೊಂದಿಕೊಳ್ಳುವಿ, ನಿನ್ನ ತುಟಿಗಳು ತಿಳಿವಳಿಕೆಯನ್ನು ಕಾಪಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹೀಗಾದರೆ ನೀನು ಸುಬುದ್ಧಿಯನ್ನು ಕೈಗೊಳ್ಳುವಿ, ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ನೀನು ಯೋಗ್ಯವಾಗಿ ನಡೆದುಕೊಳ್ಳುವೆ; ತಿಳುವಳಿಕೆಯಿಂದ ಮಾತಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ನಿನ್ನ ವಿವೇಚನೆಯನ್ನು ಉಳಿಸಿಕೊಳ್ಳುವೆ. ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:2
11 ತಿಳಿವುಗಳ ಹೋಲಿಕೆ  

ಜ್ಞಾನಿಯ ಹೃದಯದಿಂದ ಬಾಯಿಗೆ ಜಾಣತನ; ಅವನ ತುಟಿಗಳಿಗೆ ಕಲಿಕೆಯ ಚೂಟಿತನ.


ತಿಳುವಳಿಕೆಯ ಬಿತ್ತನೆ ಜ್ಞಾನಿಗಳ ಬಾಯಿಂದ; ದುರುಳರ ಹೃದಯಕ್ಕೆ ಅದು ಅಸಾಧ್ಯ.


ನನ್ನ ವಧುವೇ, ಜೇನು ಸುರಿಯುತ್ತಿದೆ ನಿನ್ನ ತುಟಿಗಳಿಂದ ಹಾಲುಜೇನು ಬರುತ್ತಿದೆ ನಿನ್ನ ನಾಲಗೆಯಡಿಯಿಂದ ಲೆಬನೋನಿನ ಸುಗಂಧ ಸೂಸುತ್ತಿದೆ ನಿನ್ನ ಉಡುಪಿನಿಂದ.


ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.


ಸಜ್ಜನರ ಭಾಷಣದಿಂದ ಬಹುಜನರಿಗೆ ಪೋಷಣ; ಬುದ್ಧಿಹೀನತೆಯಿಂದ ಮೂರ್ಖರಿಗೆ ನಾಶನ.


ಬಂದುವು ಆ ವಿಧಿಗಳು ನಿನ್ನ ಬಾಯಿಂದ I ವರ್ಣಿಸುವೆನು ಅವನ್ನು ನನ್ನ ಬಾಯಿಂದ II


ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು I ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು II


ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II


ಹೊನ್ನು ಉಂಟು, ಹವಳದ ರಾಶಿ ಉಂಟು; ಆದರೆ ತಿಳುವಳಿಕೆಯುಳ್ಳ ತುಟಿಗಳು ಬೆಲೆಮೀರಿದ ಆಭರಣಗಳು.


ಮಗನೇ, ಸುಜ್ಞಾನ, ಸದ್ಬುದ್ಧಿಗಳು ನಿನ್ನಲ್ಲಿ ಸ್ಥಿರವಾಗಿರಲಿ; ನಿನ್ನ ಕಣ್ಣುಗಳಿಂದ ಅವು ಮರೆಯಾಗದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು