Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:6 - ಕನ್ನಡ ಸತ್ಯವೇದವು C.L. Bible (BSI)

6 ಜೀವಮಾರ್ಗದ ವಿವೇಚನೆ ಅವಳಿಗಿಲ್ಲ. ಅದರ ಅರಿವೂ ಅವಳಿಗಿರುವುದಿಲ್ಲ. ಅವಳ ನಡತೆಯು ಅಷ್ಟು ಚಂಚಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ತಿಳಿದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವಳ ನಡತೆಯು ಚಂಚಲವಾಗಿರುವದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು, ಅದು ಅವಳಿಗೆ ಗೊತ್ತೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಕೆಯನ್ನು ಹಿಂಬಾಲಿಸಬೇಡ! ಆಕೆ ನೀತಿಮಾರ್ಗವನ್ನು ಬಿಟ್ಟುಹೋಗಿದ್ದಾಳೆ; ಅದು ಆಕೆಗೆ ಗೊತ್ತೇ ಇಲ್ಲ. ಎಚ್ಚರಿಕೆಯಿಂದಿರು! ಜೀವ ಮಾರ್ಗವನ್ನು ಹಿಂಬಾಲಿಸು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜೀವಮಾರ್ಗದ ವಿಚಾರ ಅವಳಿಗಿಲ್ಲ; ಆದ್ದರಿಂದ ಅವಳ ಮಾರ್ಗಗಳು ಚಂಚಲವಾಗಿವೆ, ಅದರ ಅರಿವೂ ಅವಳಿಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:6
12 ತಿಳಿವುಗಳ ಹೋಲಿಕೆ  

ನೀ ನಡೆವ ದಾರಿ ಸಮನಾಗಿರಲಿ, ನೀ ಕೈಗೊಳ್ಳುವ ಹಾದಿ ದೃಢವಾಗಿರಲಿ.


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ವ್ಯಭಿಚಾರಿಣಿಯ ವರ್ತನೆ ಹೀಗಿದೆ: ಅವಳು ಉಣ್ಣುತ್ತಾಳೆ, ಬಾಯಿ ಒರೆಸಿಕೊಳ್ಳುತ್ತಾಳೆ. ಬಳಿಕ ‘ನಾನು ತಪ್ಪುಮಾಡಲಿಲ್ಲವಲ್ಲಾ’ ಎನ್ನುತ್ತಾಳೆ.


ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.


ನನ್ನಯ ನಡತೆಯನು ಪರಿಶೋಧಿಸುತ್ತ I ತಿರುಗಿಕೊಂಡೆನು ನಿನ್ನ ಕಟ್ಟಳೆಯತ್ತ II


ಧರ್ಮನಿರತನಿಗೆ ದೊರಕುವುದು ಜೀವ; ಅಧರ್ಮಾಸಕ್ತನಿಗೆ ಸಿಗುವುದು ಮರಣ.


ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!


ಅವಳ ಬಳಿಗೆ ಹೋಗುವವರು ಹಿಂದಿರುಗುವುದಿಲ್ಲ, ಅವರಿಗೆ ಜೀವಮಾರ್ಗ ಪುನಃ ದೊರಕುವುದಿಲ್ಲ.


ಅಜ್ಞಾನವೆಂಬುವಳಾದರೊ ಕೂಗಾಟಗಾರ್ತಿ, ಏನೂ ತಿಳಿಯದ ಮೂಢ ಸ್ತ್ರೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು