Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:14 - ಕನ್ನಡ ಸತ್ಯವೇದವು C.L. Bible (BSI)

14 ಅವನ ಮನದಲ್ಲಿರುವುದು ಮೂರ್ಖತನ; ಅವನು ಸತತ ಕಲ್ಪಿಸುವುದು ಕೆಡುಕುತನ. ಅವನು ಬಿತ್ತನೆ ಮಾಡುವುದು ಕಾಳಗ, ಕದನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಮನಸ್ಸಿನಲ್ಲಿರುವುದು ದ್ರೋಹವೇ; ಯಾವಾಗಲೂ ಕೇಡನ್ನು ಕಲ್ಪಿಸುತ್ತಾನೆ, ಜಗಳದ ಬೀಜವನ್ನು ಬಿತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನ ಮನಸ್ಸಿನಲ್ಲಿರುವದು ದ್ರೋಹವೇ; ಕೇಡನ್ನು ನಿರಂತರ ಕಲ್ಪಿಸುತ್ತಾನೆ. ಜಗಳದ ಬೀಜವನ್ನು ಬಿತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನು ಕೆಡುಕ. ಎಲ್ಲಾ ಸಮಯಗಳಲ್ಲಿ ಅವನು ಕೆಡುಕನ್ನೇ ಆಲೋಚಿಸುತ್ತಾನೆ; ಎಲ್ಲೆಲ್ಲೂ ತೊಂದರೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ತನ್ನ ಹೃದಯದಲ್ಲಿ ಮೋಸಕರ ಯೋಜನೆಯನ್ನೇ ಮಾಡುತ್ತಾನೆ; ಯಾವಾಗಲೂ ಅವನು ಜಗಳವನ್ನು ಕಲ್ಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:14
22 ತಿಳಿವುಗಳ ಹೋಲಿಕೆ  

ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.


ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ;


“ಆದರೆ, ದುರುಳರು ಅಲ್ಲೋಲಕಲ್ಲೋಲವಾದ ಸಮುದ್ರದಂತೆ ಇದ್ದಾರೆ. ಅದು ಸುಮ್ಮನಿರದು - ಅದರ ಅಲೆಗಳು ಕೆಸರನ್ನೂ ಕೊಳಚೆಯನ್ನೂ ಕಕ್ಕುತ್ತಾ ಇರುತ್ತದೆ.


ಕಳ್ಳನ ಸಾಧನಗಳು ಕೆಟ್ಟವುಗಳೇ. ಅವನ ಯೋಜನೆಗಳು ಅಬದ್ಧವಾದುವೇ. ದೀನದಲಿತರ ಕೋರಿಕೆಗಳು ನ್ಯಾಯಬದ್ಧವಾಗಿದ್ದರೂ ಸುಳ್ಳುಮಾತುಗಳಿಂದ ಅವರನ್ನು ಹಾಳುಮಾಡುತ್ತಾನೆ.


ಕೆಟ್ಟತನವನ್ನು ಬಿತ್ತುವವನು ಕೇಡನ್ನೆ ಕೊಯ್ಯುವನು; ಅವನ ಸಿಟ್ಟು ಅವನನ್ನೆ ಸುಟ್ಟುಬಿಡುವುದು.


ದೋಷಿಯ ದಾರಿ ಸೊಟ್ಟಗೆ; ದೋಷರಹಿತನ ನಡತೆ ನೆಟ್ಟಗೆ.


ಕೇಡನ್ನು ಬಗೆಯಬೇಡ ನೆರೆಯವನಿಗೆ, ಪಕ್ಕದಲ್ಲೆ ನಂಬಿಕೆಯಿಂದ ವಾಸಿಸುವವನಿಗೆ.


ಅವರು ಸಂತೋಷಿಸುವುದು ಕೇಡನ್ನು ಮಾಡುವುದರಲ್ಲಿ. ಉಲ್ಲಾಸಿಸುವುದು ಕೆಟ್ಟವರ ದುಷ್ಟತನದಲ್ಲಿ,


ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II


ಕೇಡನು ಕಲ್ಪಿಸುತ್ತಾರವರು ಮನದೊಳು I ಕಲಹವೆಬ್ಬಿಸುತ್ತಾರೆ ಯಾವಾಗಲೂ II


ನೀಚನು ಕೇಡೆಂಬ ಗುಳಿಯನ್ನು ತೋಡುತ್ತಾನೆ; ಸುಡುವ ಬೆಂಕಿಯ ಜ್ಞಾಲೆ ಅವನ ನಾಲಿಗೆ.


ವಕ್ರಮನಸ್ಸುಳ್ಳವನು ಒಳಿತನ್ನು ಕಾಣನು; ಕೆಟ್ಟ ನಾಲಿಗೆಯವನು ಸಂಕಟಕ್ಕೆ ಸಿಕ್ಕಿಕೊಳ್ಳುವನು.


ಕೇಡನ್ನು ಯೋಚಿಸುವವನು ತುಂಟನು ಎನಿಸಿಕೊಳ್ಳುವನು.


ಅವರ ನಾಲಗೆಯು ಸರ್ಪದಂತೆ I ಹಾವಿನ ವಿಷ ಅವರ ತುಟಿ ಹಿಂದೆ II


ವಕ್ರಬುದ್ಧಿಯವನು ಸರ್ವೇಶ್ವರನಿಗೆ ಅಸಹ್ಯನು, ಸತ್ಯಸಂಧರು ಆತನಿಗೆ ಪ್ರೀತಿಪಾತ್ರರು.


ಕೆಟ್ಟದ್ದನ್ನು ಕಲ್ಪಿಸುವವರು ಮಾರ್ಗಭ್ರಷ್ಟರು; ಒಳ್ಳೆಯದನ್ನು ಕಲ್ಪಿಸುವವರು ಮರ್ಯಾದಸ್ಥರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು