Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:22 - ಕನ್ನಡ ಸತ್ಯವೇದವು C.L. Bible (BSI)

22 ನಡೆಯುವಾಗ ಅವು ನಿನಗೆ ಮುಂದಾಳಾಗಿರುವುವು, ಮಲಗುವಾಗ ಅವು ನಿನ್ನನ್ನು ಕಾಯುವುವು, ಎಚ್ಚರಗೊಂಡಾಗ ಅವು ನಿನ್ನೊಡನೆ ಸಂವಾದಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ಮುನ್ನಡೆಸುವುದು, ಮಲಗಿಕೊಂಡಾಗ ಅದು ನಿನ್ನನ್ನು ಕಾಯುವುದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತನಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ನಡಿಸುವದು, ಮಲಗಿಕೊಂಡಾಗ ಕಾಯುವದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀನು ಹೋಗುವಲ್ಲೆಲ್ಲಾ ಅವರ ಉಪದೇಶಗಳು ನಿನ್ನನ್ನು ನಡೆಸುತ್ತವೆ. ನೀನು ಮಲಗಿರುವಾಗಲೂ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಡನೆ ಮಾತಾಡಿ ನಿನಗೆ ಮಾರ್ಗದರ್ಶನ ನೀಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀನು ನಡೆಯುವಾಗ ಅವು ನಿನಗೆ ಮಾರ್ಗದರ್ಶಿಯಾಗಿರುತ್ತವೆ. ನೀನು ಮಲಗುವಾಗ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಂದಿಗೆ ಮಾತಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:22
12 ತಿಳಿವುಗಳ ಹೋಲಿಕೆ  

ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು.


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ನಿನ್ನ ನುಡಿಯನು ಧ್ಯಾನಿಸಬೇಕೆಂದೇ I ಎಚ್ಚರಗೊಳ್ಳುವೆ ಇರುಳಿನ ಜಾವಕೆ ಮುಂದೆ II


ನಡತೆಯಲಿ ಶುದ್ಧವಿರಲು ಯುವಜನಕೆ ಹೇಗೆ ಸಾಧ್ಯ? I ನಿನ್ನಯ ವಾಕ್ಯಾನುಸರಣೆಯಿಂದಲೆ ಅವರಿಗದು ಸಾಧ್ಯ II


ನನ್ನೀ ಬಾಳ ಪ್ರವಾಸ ಮಂದಿರದೊಳು I ಗಾನವಾದುವು ನಿನ್ನಾನಿಬಂಧನೆಗಳು II


ನಿನ್ನಾಜ್ಞೆಯು ಆನಂದದಾಯಕ I ಅವೇ ನನಗೆ ಮಂತ್ರಾಲೋಚಕ II


ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕ್ಕೆ I ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ II


ನಿನ್ನ ಧರ್ಮಶಾಸ್ತ್ರ ನನಗೆನಿತೋ ಪ್ರಿಯ I ನಾನದರಲೇ ದಿನವೆಲ್ಲಾ ಧ್ಯಾನಮಯ II


ಲೋಕವಿಚಾರಗಳಲಿ ಹಿಂಸಾತ್ಮಕ ಮಾರ್ಗ ಹಿಡಿದಿಲ್ಲ I ನಿನ್ನಧರ ವಚನವನು ನಾನೆಂದಿಗು ಮೀರಿ ನಡೆದಿಲ್ಲ II


ಶತ್ರುಗಳು ಸಾವಿರಾರಿದ್ದರೂ ನಾನವರಿಗಂಜೆನು II ಸುತ್ತುವರಿದು ಸನ್ನದ್ಧರಾಗಿದ್ದರೂ ಭಯಪಡೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು